ನವದೆಹಲಿ : ಕೇಂದ್ರ ಸರ್ಕಾರದ ರಾಷ್ಟ್ರೀಯ ವ್ಯಾಪಾರಿಗಳ ಕಲ್ಯಾಣ ಮಂಡಳಿಯ ಸದಸ್ಯರಾಗಿ ಪ್ರಕಾಶ್ ಪ್ರಿಗಾಲ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವ್ಯಾಪರಿಗಳ ಹಿತ ರಕ್ಷಣೆಗಾಗಿ ಇರುವ ಕಲ್ಯಾಣ ಮಂಡಳಿಗೆ ರಾಜ್ಯದಿಂದ ಈ ನೇಮಕ ಮಾಡಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಪ್ರಕಾಶ್ ಪ್ರಿಗಾಲ್, ಜಿ.ಎಸ್.ಟಿ ತೊಂದರೆಗಳು, ಕಾರ್ಮಿಕರು ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ವ್ಯಾಪಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ವ್ಯಾಪಾರಿ ಸಮೂಹದ ಸಮಸ್ಯೆಗಳನ್ನು ಬಗೆಹರಿಸಲು ಶೀಘ್ರದಲ್ಲೇ ಬೃಹತ್ ವ್ಯಾಪಾರಿಗಳ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದರು
Facebook
Twitter
LinkedIn
WhatsApp