ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಮಂಡ್ಯ: ಪಾಂಡವಪುರ  ಆರೋಗ್ಯ ಇಲಾಖೆ ಕ್ವಾಟರ್ಸ್ ‍ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರ‍್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ರ‍್ಭಪಾತ ಮಾಡುವ ಯಂತ್ರೋಪಕರಣಗಳು ‌ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಆನಂದ್, ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಆನಂದ್ಗೆ ನೀಡಲಾಗಿದ್ದ ರ‍್ಕಾರಿ ನಿವಾಸದಲ್ಲೇ ಕೃತ್ಯ ಎಸಗಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿದ್ದಾರೆ. ಈ ದಂಧೆಯಲ್ಲಿ ಕೆಲವು ವೈದ್ಯಾಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ದಾಖಲಾಗಿದೆ.

ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕಳೆದ ರ‍್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕರಾಳ ದಂಧೆ ಬಯಲಾಗಿತ್ತು. ಆಲೆಮನೆ ಮಾತ್ರವಲ್ಲದೆ  ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ ಕೃತ್ಯ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ತಪಾಸಣೆ ವೇಳೆ ಅಂಥ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿದ್ದವು.

ನಾಗಮಂಗಲದ ೨ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕರಾಳ ದಂಧೆ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿತ್ತು. ಅಧಿಕಾರಿಗಳ ಪರಿಶೀಲನೆ ವೇಳೆ ಸಿಬ್ಬಂದಿಗಳ ಕಳ್ಳಾಟ ಆಡಿರುವುದು ಗೊತ್ತಾಗಿತ್ತು. ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳ ಕಣ್ತಪ್ಪಿಸಲು ಅಲ್ಲಿನ ಸಿಬ್ಬಂದಿ ಯತ್ನಿಸಿದ್ದರು.

ಅಧಿಕಾರಿಗಳು ಭೇಟಿ ನೀಡಿದ ವೇಳೆ ಸ್ಕ್ಯಾನಿಂಗ್ ಸೆಂಟರ್‌ಗಳ ಸಿಬ್ಬಂದಿ ಸರ‍್ಪಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದರು. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಇದಕ್ಕೆ ಕಾರಣ, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾವನ್ನೇ ಸಿಬ್ಬಂದಿ ಡಿಲೀಟ್ ಮಾಡಿದ್ದರು. ಇದೀಗ, ಮಾಹಿತಿ ಡಿಲೀಟ್ ಮಾಡಿದ ಹಿನ್ನೆಲೆ ೨ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗಿತ್ತು. ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಬೀಗ ಜಡಿಯಲಾಗಿತ್ತು.

 ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ೨ ರ‍್ಷದ ಮಾಹಿತಿ ಹಾಗೂ ಕಾವೇರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ೩ ತಿಂಗಳ ಮಾಹಿತಿ ಡಿಲೀಟ್ ಮಾಡಲಾಗಿತ್ತು. ಈ ಸ್ಕ್ಯಾನಿಂಗ್ ಸೆಂಟರ್‌‌ಗಳು ನಾಗಮಂಗಲದ ರ‍್ಕಾರಿ ಆಸ್ಪತ್ರೆ ಸಮೀಪವೇ ಇವೆ. ಉಪವಿಭಾಗಾಧಿಕಾರಿ ನಂದೀಶ್ ಹಾಗೂ ಕುಟುಂಬ‌ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ನೇತೃತ್ವದಲ್ಲಿ ಅವುಗಳನ್ನು ಸೀಜ್ ಮಾಡಲಾಗಿತ್ತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top