ಅಧಿಕಾರಿಗಳು ಶಿಸ್ತು, ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ

ಕೆಎಸ್ಆರ್ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಭೇಟಿ ಪರಿಶೀಲನೆ

ಬಳ್ಳಾರಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರು, ಇತ್ತೀಚೆಗೆ ಬಳ್ಳಾರಿ ಜಿಲ್ಲಾ ಪೊಲೀಸ್ ಕಚೇರಿಯ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

 

        ಡಿ.ಎ.ಆರ್ ಕೇಂದ್ರಸ್ಥಾನಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ನಂತರ ಅಧಿಕಾರಿಗಳ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿ ಪೊಲೀಸ್ ಕುಟುಂಬದವರೊಂದಿಗೆ ಸಂವಹನ ನಡೆಸಿ ಕುಂದು ಕೊರತೆಗಳನ್ನು ಅಲಿಸಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಅಪರಾಧ ವಿಮರ್ಶನ ಸಭೆಯನ್ನು ನಡೆಸಿದ ಅವರು, ಠಾಣೆಗೆ ಭೇಟಿ ನೀಡುವ ಸಾರ್ವಜನಿಕರ ದೂರುಗಳನ್ನು ವಿಳಂಬ ಮಾಡದೇ ನೊಂದಣಿ ಮಾಡಿಕೊಂಡು, ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

        ಪ್ರಕರಣಗಳ ಕಡತಗಳನ್ನು ಪರಿಶೀಲನೆ ನಡೆಸಿ ಕ್ರಮಬದ್ಧವಾದ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಸೂಚನೆ ನೀಡಿದರು.

 

ನಗರದ ಕವಾಯತು ಮೈದಾನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಪರೇಡ್ ಪರಿವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಕ್ತ ಶಿಸ್ತು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ಸೂಚನೆ ನೀಡಿದರು.

ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರವಿಕುಮಾರ ಹಾಗೂ ಇನ್ನೀತರರು ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top