ಸೆ.3 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಚಿವರು, ಶಾಸಕರಿಗೆ ಸನ್ಮಾನ ಸಮಾರಂಭ

ಬಳ್ಳಾರಿ: ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾಪುರಿ ಸೂರ್ಯ ಸಿಂಹಾಸನ ಭಗೀರಥ ಪೀಠ ಮಹಾಸಂಸ್ಥಾನ ಬ್ರಹ್ಮ ವಿದ್ಯಾನಗರ, ಸುಕ್ಷೇತ್ರ ಮಧುರೆ ಹೊಸದುರ್ಗದಲ್ಲಿ ಸೆ.3ರಂದು ರಾಜ್ಯ ಮಟ್ಟದ ದ್ವಿತೀಯ ಪಿಯುಸಿ, ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಚಿವರು, ಶಾಸಕರಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ, ನಿವೃತ್ತಿ ಪಡೆದ ಅಧಿಕಾರಿಗಳಿಗೆ, ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಉಪ್ಪಾರ್ ಅವರು ಹೇಳಿದರು. 

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಭಗೀರಥ ಮಹಾ ಸಂಸ್ಥಾನದ ಶ್ರೀ ಡಾ.ಪುರುಷೋತ್ತಮಾನಂದಪುರಿ ಮಹಾ ಸ್ವಾಮೀಜಿ ಅವರು ಸಮಾರಂಭದ ಸಾನಿದ್ಯ ವಹಿಸಲಿದ್ದಾರೆ. ಶಾಸಕರು ಹಾಗೂ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷ ಸಿ.ಪುಟ್ಟರಂಗ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ , ವೆಂಕೋಭ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಅವರು ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಡಿ.ಸುಧಾಕರ್ ಅವರು ಶ್ರೀ ಭಗೀರಥ ಮಹರ್ಷಿ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ. ವಿಶೇಷ ಸಾಧಕರಿಗೆ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರು ಸನ್ಮಾನಿಸಲಿದ್ದಾರೆ.

 

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸನ್ಮಾನಿಸಲಿದ್ದಾರೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಸನ್ಮಾನಿಸಲಿದ್ದಾರೆ. ಪದವಿ ಉನ್ನತ ವ್ಯಾಸಂಗದಲ್ಲಿ ರ್ಯಾಕ್ ಪಡೆದ ವಿದ್ಯಾರ್ಥಿಗಳಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸನ್ಮಾನಿಸಲಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿವೃತ್ತ ಅಧಿಕಾರಿಗಳಿಗೆ ಸನ್ಮಾನಿಸಲಿದ್ದಾರೆ. ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.  

ಈ ಸಂದರ್ಭದಲ್ಲಿ ಯುವ ಘಟಕದ ಅಧ್ಯಕ್ಷ ಬಸವರಾಜ್, ಹಿರೀಯ ಮುಖಂಡ ಯು.ಉರಕುಂದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರಗೇಶ್ ಉಪ್ಪಾರ, ತಾಲೂಕು ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ, ನಗರ ಅಧ್ಯಕ್ಷ ಶ್ರೀರಾಮುಲು, ಗೌರವ ಅಧ್ಯಕ್ಷರಾದ ನೀಲಕಂಠಪ್ಪ, ಮಲ್ಲಪ್ಪ, ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಉಳೂರು, ನೌಕರರ ಸಂಘದ ಅಧ್ಯಕ್ಷ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top