ಪ್ರತಿಪಕ್ಷಗಳು ನೇಹಾ  ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ  ತಿಳಿಸಿದರು.

 

ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು ನಾನು  ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ.  ರ‍್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. 

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು  ದುರ್ದೈವ:

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.  ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು  ದರ‍್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ರ‍್ಕಾರದ ಮೇಲೆ ಆಗುವುದಿಲ್ಲ  ಎಂದರು. ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ರ‍್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ರ‍್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ರ‍್ಕಾರದ ವಿರುದ್ಧವಾಗಿದ್ದಾರೆ.ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ  ಜನರಿಗೆ ಖಾಲಿ ಚೊಂಬು ಕೊಟ್ಟಿದೆ: ಕಾಂಗ್ರೆಸ್ ನ ಚೊಂಬು ಜಾಹೀರಾತನ್ನು ರಾಜ್ಯ ರ‍್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾತನಾಡಿರುವ ಬಗ್ಗೆ ಮಾತನಾಡಿ  ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ರ‍್ಕಾರ ಖಾಲಿ ಚಂಬು ಕೊಟ್ಟಿದೆ ಎಂದು ತಿಳಿಸಲು ನೀಡಿದೆ. ದೇಶದ ಜನರಿಗೆ ೧೫ ಲಕ್ಷ ಕೊಟ್ಟರೇ? ೨ ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಿದೆ ಎಂದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, ೧೧ ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ರ‍್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೋದಿ ಕೊಟ್ಟಿರುವ ಆಶ್ವಾಸನೆಗಳನ್ನು ಒಂದನ್ನೂ ಈಡೇರಿಸಿಲ್ಲ.ದೇಶದ ಜನರಿಗೆ ಖಾಲಿ ಚಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ರ‍್ಕಾರದ ಅವಧಿಯಲ್ಲಿ ಬೊಕ್ಕಸ  ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿ ಗಳನ್ನು  ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ  ಜೊತೆಗೆ ಜೆಡಿಎಸ್ ಮೈತ್ರಿ: ಏಣಿ ಹತ್ತಿಸಿ ನಂತರ ರ‍್ವನಾಶ ಮಾಡುತ್ತಾರೆ ಎಂದು ಹೆಚ್.ಡಿ  ಕುಮಾರಸ್ವಾಮಿ ಹೇಳಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವ ರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು ಎಂದರು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top