ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ನೈತಿಕತೆ ವಿಪಕ್ಷಗಳಿಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರುರಾಜ್ಯದಲ್ಲಿರುವ ನಿಮ್ಮ ಪಕ್ಷದ ಒಬ್ಬ ಸರ್ವೊಚ್ಚ ನಾಯಕರು ಪೋಕ್ಸೊ ಕಾಯ್ದೆಯಡಿ ಜೈಲಿಗೆ ಹೋಗುವ ದಾರಿಯಲ್ಲಿದ್ದಾರೆ. ನಿಮ್ಮ ಮಿತ್ರಪಕ್ಷವಾದ ಜೆಡಿ(ಎಸ್) ನ  ಮಾಜಿ ಸಂಸದ ನೂರಾರು ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆಶಾಸಕರಾಗಿರುವ ಅವನ ತಂದೆ ಮೇಲೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆಅದೇ ಕುಟುಂಬದ ಇನ್ನೊಬ್ಬ ಶಾಸಕ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿದ್ದಾನೆ. ಇಂತಹ ಮಹಿಳಾ ಭಕ್ಷಕರನ್ನು ಕಟ್ಟಿಕೊಂಡು ಮೆರೆಯುತ್ತಿರುವ ನಿಮಗೆ ನಮ್ಮ ಸರ್ಕಾರದ ವಿರುದ್ದ ಆರೋಪ ಮಾಡುವ ಯಾವ ನೈತಿಕತೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’’ ಎಂದು ಗೋಳಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರೇಮಹಿಳಾ ಭಕ್ಷಣೆ ಮತ್ತು ಮಹಿಳಾ ಭಕ್ಷಕರಿಗೆ ರಕ್ಷಣೆ ಕೊಡುವುದನ್ನು ನೀವು ನಿಲ್ಲಿಸಿದರೆ ರಾಜ್ಯದಲ್ಲಿ ಮಹಿಳೆಯರು ಮಾತ್ರವಲ್ಲ ಬಾಲಕಿಯರೂ ಸುರಕ್ಷಿತರಾಗಿರುತ್ತಾರೆ. ರಾಜ್ಯವೂ ಮಹಿಳೆಯರ ಪಾಲಿಗೆ ಸುರಕ್ಷಿತವಾಗಿರುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಚಾವೋ, ಭೇಟಿ ಡಾವೋ ಘೋಷಣೆಯ ಹಿಂದಿನ ಹಿಪಾಕ್ರಸಿಯನ್ನು ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ಬಂಡಿ ಸಂಜೀವ್ ಕುಮಾರ್ ಲೋಕಸಭೆಯಲ್ಲಿ ದಾಖಲೆ ಸಹಿತ ಬಿಡಿಸಿಟ್ಟಿದ್ದಾರೆ. ‘’2014ರಲ್ಲಿ ದೇಶದ 3,39,457 ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದ್ದರೆ 2022ರಲ್ಲಿ ಈ ಸಂಖ್ಯೆ 4,45,256ಕ್ಕೆ ಏರಿದೆ. ಇದೇ ಅವಧಿಯಲ್ಲಿ ಮಕ್ಕಳ ಮೇಲಿನ ಅತ್ಯಾಚಾರಗಳ ಸಂಖ್ಯೆ 89,423ರಿಂದ 1,62,449ಕ್ಕೆ ಹೆಚ್ಚಿದೆ’’ ಎಂದು ಸಚಿವರು ಕಳೆದ ಜುಲೈ 30ರಂದು ಲೋಕಸಭೆಯಲ್ಲಿ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ. ಇದೇನಾ ನೀವು ಹೇಳುತ್ತಿರುವ ಬೇಟಿ ಬಚಾವೋ?

 

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎನ್‌ಸಿಆರ್‌ಬಿಯ 2021ರ ವರದಿ ಪ್ರಕಾರ ದೇಶದಲ್ಲಿ ಪ್ರತಿದಿನ 86 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆಪ್ರತಿ ಗಂಟೆಗೆ 49 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯದ ಪ್ರಕರಣಗಳಲ್ಲಿ ಕಳೆದ ಆರು ವರ್ಷಗಳಿಂದ ಬಿಜೆಪಿ ಆಡಳಿತದ ಉತ್ತರಪ್ರದೇಶ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. 2017ರಲ್ಲಿ ಉತ್ತರಪ್ರದೇಶದ ಉನ್ನಾವೊದಲ್ಲಿ 2020ರಲ್ಲಿ ಅದೇ ರಾಜ್ಯದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಗಳ ಪ್ರಕರಣಗಳಲ್ಲಿ ಆರೋಪಿಗಳಿಗೆ ರಕ್ಷಣೆ ಮಾಡುತ್ತಿರುವವರು ಯಾರು ಬಿಜೆಪಿ ನಾಯಕರೇಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಬಿಜೆಪಿ ಮಾಜಿ ಸಂಸದ ಬೃಜ್ ಭೂಷನ್ ಸರಣ್ ಸಿಂಗ್ ಎಂಬ ಸ್ತ್ರೀಪೀಡಕನನ್ನು ರಕ್ಷಿಸುತ್ತಿರುವವರು ಯಾರುಈ ಪ್ರಶ್ನೆಗಳಿಗೆ ಉತ್ತರಿಸುವ ನೈತಿಕತೆ ನಿಮಗಿದೆಯಾ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top