ಹೊಸಪೇಟೆ,ಜನವರಿ,25 : ಆನಂದ್ ಸಿಂಗ್ ಅವರ ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನವರಿ ೨೬ರಂದು ವಿಜಯನಗರ ಕ್ಷೇತ್ರ ಬಂದ್‌ಗೆ ಬೆಂಬಲ ಬೇಕು ಅಂತ ಸಂದೇಶ ಕೂಡ ರವಾನಿಸಿದ್ದಾರೆ. ಆನಂದ್ ಸಿಂಗ್ ಅವರಿಗೆ ಕೊಪ್ಪಳ ಉಸ್ತುವಾರಿ ನೀಡಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ನಮ್ಮೂರಿನ ಸಚಿವರು ನಮ್ಮ ಜಿಲ್ಲೆಗೆ ಬೇಕು ಎಂದು ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಂದೇಶ ರವಾನಿಸಿದರು.
