ಬೆಂಗಳೂರು: “ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದ ಬಳಿ ಸೋಮವಾರ ಮಾಧ್ಯಮಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆರೋಪಗಳ ಬಗ್ಗೆ ಗಮನ ಸೆಳೆದಾಗ ಹೀಗೆ ಪ್ರತಿಕ್ರಿಯಿಸಿದರು.

‘ಬಿಜೆಪಿ ಆಪರೇಷನ್ ಮಾಡಿರಲಿಲ್ಲ. ಮೈತ್ರಿ ಸರ್ಕಾರ ಕೆಡವಿದ್ದೇ ನಾವು. ಈಗ ಬಿಜೆಪಿ ಆಪರೇಶನ್ ಕಮಲ ಮಾಡುತ್ತಿದೆ ಎಂಬುದು ಶಿವಕುಮಾರ್ ಕೃಪಾಪೋಷಿತ ನಾಟಕ ಮಂಡಳಿಯ ಸೃಷ್ಟಿ ಎಂಬ ರಮೇಶ್ ಜಾರಕಿಹೊಳಿ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದಾಗ ಶಿವಕುಮಾರ್ ಈ ರೀತಿ ಉತ್ತರಿಸಿದರು.
Facebook
Twitter
LinkedIn
WhatsApp
Email
Print
Telegram