ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಕೂಡಲೆ  ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ  ಬಳ್ಳಾರಿ ಡಿವೈಎಫ್ಐ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಕೆ

ಬಳ್ಳಾರಿ:  ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ,ಅತ್ಯಾಚಾರಗಳ ವಿರುದ್ಧ ಈಗಾಗಲೇ ಅತ್ಯಂತ ವ್ಯಾಪಕವಾಗಿ ತೀವ್ರ ಆಕ್ರೋಶ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ. ಡಿವೈಎಫ್ಐ ಸೇರಿದಂತೆ ಸಾರ್ವಜನಿಕವಾಗಿ ವ್ಯಕ್ತವಾದ ತೀವ್ರ ಒತ್ತಡದಿಂದಾಗಿ ರಾಜ್ಯ ಸರ್ಕಾರ ಈಗಾಗಲೇ SIT ರಚಿಸಿ ಪ್ರಕರಣದ ತನಿಖೆ ನಡೆಯುತ್ತಿದೆ. 

ಡಿವೈಎಫ್ಐ ಸೇರಿದಂತೆ ಸಾರ್ವಜನಿಕವಾಗಿ ವ್ಯಕ್ತವಾದ ತೀವ್ರ ಒತ್ತಡದಿಂದಾಗಿ ರಾಜ್ಯ ಸರ್ಕಾರ ಈಗಾಗಲೇ SIT ರಚಿಸಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ನಡುವೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರಕರಣದ ದಿಕ್ಕು ತಪ್ಪಿಸಲು ಹಾಗೂ ಪ್ರಕರಣದ ತನಿಖೆಯನ್ನು SIT ಬದಲು CBI ಗೆ ವಹಿಸುವಂತೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ವಿಶ್ವಾಸ ಕುಗ್ಗಿಸಿ ಅವರು SIT ಮುಂದೆ ಹಾಜರಾಗದಂತ ಪರಿಸ್ಥಿತಿ ಸೃಷ್ಟಿಸುತ್ತಿವೆ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಈ ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರದ ಆಚೆಗೆ ಸಂತ್ರಸ್ತ ಮಹಿಳೆಯರ ರಕ್ಷಣೆ, ಪುನರ್ವಸತಿ ಹಾಗೂ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಚಿತ್ರೀಕರಣ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ ಮತ್ತು ಲೈಂಗಿಕ ವೀಡಿಯೋಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿರುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಬೇಕಾದ ಸೂಕ್ಷ್ಮತೆ, ಪ್ರಬುದ್ದತೆ ಮತ್ತು ದಿಟ್ಟತನವನ್ನು ತೋರಿಸಬೇಕಿದೆ ಎಂದು ಡಿವೈಎಫ್ಐ ಜಿಲ್ಲಾ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದೆ. ಈ ಸಂದರ್ಭದಲ್ಲಿ   ಡಿವೈಎಫ್ಐ ಜಿಲ್ಲಾಧ್ಯಕ್ಷ ಯು.ಎರ್ರಿಸ್ವಾಮಿ      ಕಾರ್ಯದರ್ಶಿ ಸ್ವಾಮಿ ಉಪಾಧ್ಯಕ್ಷರು ಬೈಲಾ ಹನುಮಪ್ಪ ಜಿ ಎನ್ ಎರ್ರಿಸ್ವಾಮಿ ಬಿಪಿ ನವೀನ್. ಎ.ತಿಪ್ಪೆರುದ್ರ ಹೆಚ್ ಎರ್ರಿಸ್ವಾಮಿ ಕಾರೇಕಲ್ ವಾಜಪೇಯಿ ಗೌಡ  ಮಸ್ತಾನ್ ಸಾಬ್ ಕೆ ಶಿವಾನಂದ್  ಎಸ್ ಎಂ ನಾಗರಾಜ್ ಸ್ವಾಮಿ ಎಸ್ ದೊಡ್ಡಬಸಪ್ಪ ನಲ್ಲಚೆರುವು ರಾಜ್ ಪ್ರಸಾದ್ ಕೆ ರಮೇಶ್  ಆಟೋ ತಿಪ್ಪೇಸ್ವಾಮಿ ಯು ಎರಿಸ್ವಾಮಿ ಆಟೋ ಸಿದ್ದಪ್ಪ ಇನ್ನು ಮುಂತಾದವರು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top