ಬೆಂಗಳೂರು : ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು’ ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು.ರಾಜ್ಯ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಆಕ್ಸಿಯಂ ಸ್ಪೇಸ್-4 ಮಿಷನ್ ಯಶಸ್ವಿಯ ರೂವಾರಿಯಾಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಮುಖ್ಯ: ಶುಭಾಂಶು ಶುಕ್ಲಾ



