ಮಾಜಿ ಸಿಎಂ ಬಿಎಸ್‍ವೈ ಮೇಲೆ ಪೋಕ್ಸೋ ಪ್ರಕರಣ ದಾಖಲು

ಬೆಂಗಳೂರು : ಬಿಜೆಪಿಯ ಹಿರಿಯ ದುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ವಿರುದ್ಧ ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣವೊಂದು ದಾಖಲಾಗಿದೆ.

 

ಹೌದು, 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ದೂರು  ದಾಖಲಿಸಲಾಗಿದೆ.

ಸಂತ್ರಸ್ತೆಯ ತಾಯಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ ಪೊಲೀಸರು ಗುರುವಾರ ಮಧ್ಯರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಫೆಬ್ರವರಿ 2ರಂದು ಬಿಎಸ್‌ ಯಡಿಯೂರಪ್ಪ ಅವರ ನಿವಾಸದಲ್ಲಿ ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ  ತಿಳಿಸಿದ್ದಾರೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top