ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ ಗೆ ರಿಟ್ ‍ಅರ್ಜಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ  ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪರನ್ನು ಬಂಧಿಸಲು ನರ‍್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ‍ಕರ್ನಾಟಕ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಘಟನೆ ನಡೆದು ಹಲವು ತಿಂಗಳುಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿ ‍ಯಲ್ಲಿ ಉಲ್ಲೇಖಿಸಿದ್ದಾರೆ.

ಕನಿಷ್ಠ ೪೧ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಈ ಮಧ್ಯೆ, ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದರ‍್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನರ‍್ದೇಶಿಸಬೇಕೆಂದು ರಿಟ್ ಅರ್ಜಿ ಯಲ್ಲಿ ಮನವಿ ಮಾಡಲಾಗಿದೆ.

ಮತ್ತೊಂದೆಡೆ, ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಯಡಿಯೂರಪ್ಪ ಕೂಡ ಹೈಕರ‍್ಟ್ ಮೆಟ್ಟಿಲೇರಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫರ‍್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ ೧೨ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಹೈಕರ‍್ಟ್ಗೆ ತಿಳಿಸಿದ್ದಾರೆ.

 

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂರ‍್ಭದಲ್ಲೇ ಮರ‍್ಚ್ನಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಮಾತ್ರವಲ್ಲದೆ ರಾಜಕಾರಣಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ೫೩ ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇತ್ತೀಚೆಗಷ್ಟೇ ಮೃತಪಟ್ಟಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top