ಆಸಿಡ್ ಎರಚಿ ಪರಾರಿಯಾಗಿದ ಆರೋಪಿ ಪೋಲಿಸರ ವಶ

ಬೆಂಗಳೂರು: ಯುವತಿಯ ಮೇಲೆ ಆಸಿಡ್ ಎರಚಿ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿ ತಮಿಳುನಾಡಿನಲ್ಲಿ ಅಡಗಿಕೊಂಡಿದ್ದ ಆರೋಪಿ ನಾಗೇಶ್‌ನನ್ನು ರಾಜ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇಶದಲ್ಲಿಯೇ, ಕರ್ನಾಟಕ ಪೊಲೀಸ್ ಅತ್ಯಂತ ದಕ್ಷ ಹಾಗೂ ವೃತ್ತಿಪರ ಪಡೆಯೆಂದು, ಸಾಬೀತುಪಡಿಸಿದ್ದು, ಇದಕ್ಕಾಗಿ ತಾವು ಪೊಲೀಸರನ್ನು ಅಭಿನಂದಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹೀನಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ತಮಿಳುನಾಡು ಪೊಲೀಸರೂ, ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ, ಅವರಿಗೂ ಅಭಿನಂದನೆಗಳು ಎಂದರು. ಅಪರಾಧಿಗೆ ಕಠಿಣ ಶಿಕ್ಷೆಯಾಗುವಂತೆ, ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯದಲ್ಲಿ ಆತನ ವಿಚಾರಣೆ ನಡೆಸಿ, ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆಯಾಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top