ಬೆಂಗಳೂರು,ಮಾ,30 : ಕೇಂದ್ರ ಗೃಹ ಸಚಿವ ಮಾನ್ಯ ಶ್ರೀ ಅಮಿತ್ ಶಾ ರವರು, ದಿನಾಂಕ ಒಂದರಂದು, ಬೆಂಗಳೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಪೂರ್ವ ಸಿದ್ಧತಾ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್, ನಗರ ಪೊಲೀಸ್ ಮುಖ್ಯಸ್ಥ ಶ್ರೀ ಕಮಲ್ ಪಂತ್ ಹಾಗೂ ಇತರ ಹಿರಿಯ ಪೋಲೀಸ್ ಅಧಿಕಾರಿಗಳು ಹಾಜರಿದ್ದರು.

