ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ಮಹಾ ರಥೋತ್ಸವದ ಪೂರ್ವಭಾವಿ ಸಭೆ 

ಬಳ್ಳಾರಿ: ನಗರದ ಕ್ಷೇತ್ರ ನಾಥ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಜಾತ್ರೆ ಹಾಗೂ ಮಹಾ ರಥೋತ್ಸವದ ಪೂರ್ವಭಾವಿ ಸಭೆ  ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ನಡೆಯಿತು.

 

ಬಳ್ಳಾರಿ ಜಿಲ್ಲಾಡಳಿತ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಯುವ ಸಬಲೀಕರಣ ಹಾಗೂ ಕ್ರೀಡೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ಅದ್ಧೂರಿಯಾಗಿ ಬಳ್ಳಾರಿಯ ಅರಾದ್ಯ ದೈವ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವನ್ನು ಅದ್ಧೂರಿಯಾಗಿ ಹಾಗೂ ಸಂಪ್ರದಾಯ ಬದ್ದವಾಗಿ ಆಚರಿಸಲಾಗುವುದು ಎಂದ ಅವರು ಜಾತ್ರಾ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಅಗಮಿಸುವ ಹಿನ್ನೆಲೆಯಲ್ಲಿ ನಿರ್ಮಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಹಾಗೇಯೇ ಜಾತ್ರೆಗೆ ಅಗಮಿಸುವ ಜನರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ, ತೇರಿನ ನಿರ್ವಹಣೆ ಜೊತೆಗೆ ಧಾರ್ಮಿಕ ಆಚರಣೆಗೆ ದೇವಸ್ಥಾನದ ಒಳಗಡೆ ಹಾಗೂ ಹೊರಗಡೆ ವ್ಯವಸ್ಥೆಗಳನ್ನು ಮಾಡಲಾಗುವುದಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜಾತ್ರೆಗೆ ಮೆರಗು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಮೇಯರ್ ಬಿ.ಶ್ವೇತ, ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರ, ಎಸ್ಪಿ ರಂಜಿತ್ ಕುಮಾರ್ ಬಂಡಾರ್ ಧಾರ್ಮಿಕ ದತ್ತಿ ಇಲಾಖೆಯ ಎಸಿ ಗಂಗಾದರ್, ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಹಾಜರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top