ಬೆಂಗಳೂರು: ಯಾವುದೇ ತನಿಖೆಗಳನ್ನು ಪೂರ್ಣಗೊಳಿಸಲು ಒತ್ತಾಯ ಹಾಕುವುದು ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ತರಿಸಿಕೊಳ್ಳುವುದು ತಪ್ಪಲ್ಲ ಎಂದು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಬಿಜೆಪಿಯವರು ನಡೆಸಿರಬಹುದಾದ ಅವ್ಯವಹಾರಗಳ ಕುರಿತು ದಾಖಲೆಗಳನ್ನು ತರಿಸಿಕೊಳ್ಳಲು ಸರ್ಕಾರ ಒತ್ತಡ ಹಾಕಿರುವುದು ತನಿಖೆಯನ್ನು ಶೀಘ್ರ ಪೂರ್ಣಗೊಳಿಸುವ ಉದ್ದೇಶದಿಂದ ಆದರೆ ಒತ್ತಡ ಹಾಕಿ ದಾಖಲೆಗಳನ್ನು ತರಿಸಿಕೊಂಡಿದ್ದಾರೆ ಎನ್ನುವ ಮಾಜಿ ಆರೋಗ್ಯ ಸಚಿವ ಡಾ. ಸುಧಾಕರ್ ಆರೋಪಕ್ಕೆ ಪ್ರಿಯಾಂಕಾ ಖರ್ಗೆ ಚಾಟಿ ಬೀಸಿದ್ದಾರೆ.
ಸದನದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ಹೇಳಿರುವ 21 ಹಗರಣಗಳು ಕೇವಲ ಉದಾಹರಣೆಗಳಷ್ಟೇ. ಆದರೆ ಬಿಜೆಪಿ ಅವಧಿಯ ಎಲ್ಲಾ ಹಗರಣಗಳನ್ನು ನಾವು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತೇವೆ. ಆದರೆ ಕೇಂದ್ರ ಸರ್ಕಾರ ಕೆಲ ತನಿಖಾ ಸಂಸ್ಥೆಗಳು ಈ ಪ್ರಕರಣದಲ್ಲಿ ಮೂಗು ತೂರಿಸುತ್ತಿವೆ. ಇದನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.
ನ್ಯಾಯಮೂರ್ತಿ ಡಿ. ಕುನ್ಹಾ ಆಯೋಗ ಕೋವಿಡ್ ಹಗರಣಕ್ಕೆ ಸಂಬಂಧಿಸಿದ ಮಧ್ಯಂತರ ವರದಿಯಲ್ಲಿ ನಿಯಮ ಉಲ್ಲಂಘನೆಗಳು ಉಲ್ಲೇಖವಾಗಿವೆ.