ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು: PSI ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ತಮ್ಮ ಬಳಿ ಅಕ್ರಮಕ್ಕೆ, ಸಂಬಂಧಿಸಿದಂತೆ, ತಮಗೆ ಸಲ್ಲಿಕೆ ಯಾಗಿದೆ, ಎನ್ನಲಾದ, ಒಂದು ಆಡಿಯೋ ರೆಕಾರ್ಡ್, ಅನ್ನು, ಖರ್ಗೆಯವರು, ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ, ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ.

ಇಂಥ ಕೃತ್ಯಗಳಿಂದ ಬಡ ಕುಟುಂಬದಿಂದ ಬಂದಂಥ ಪ್ರಾಮಾಣಿಕ ಹಾಗೂ ಪ್ರತಿಭಾವಂತ ಆಕಾಂಕ್ಷಿ ಗಳು, ಮೂಲೆ ಗುಂಪಾದರೆ, ಸಮಾಜಕ್ಕೆ ಆಗುವ ನಷ್ಟ ಅಪಾರ ಮಾನ್ಯ ಶಾಸಕ ಪ್ರಿಯಾಂಕ್ ಖರ್ಗೆ ಯವರಿಗೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿರುವ ಸಿಐಡಿ ತನಿಖೆಗೆ ಸಹಾಯವಾಗುವಂತೆ ಸಿಐಡಿ ಪೊಲೀಸರಿಗೆ, ತಮ್ಮ ಬಳಿ ಇರಬಹುದಾದ ಸಾಕ್ಷ್ಯಗಳನ್ನು ಒದಗಿಸಿ, ತಮ್ಮ ಹೊಣೆಗಾರಿಕೆ ಯನ್ನು ನಿಭಾಯಿಸುವಂತೆ ವಿನಂತಿಸಿದ್ದೆ.

ಈಗಲಾದರೂ, ಖರ್ಗೆಯವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು, ಹಾಗೂ ಅಕ್ರಮ ನೇಮಕಾತಿ ಪ್ರಕರಣ ದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನು ಪ್ರಕ್ರಿಯೆ ಗಳಿಗೆ ಒಳಪಡಿಸಲು ಸಹಕರಿಸಬೇಕು. ತನಿಖೆಯು ನಿಷ್ಪಕ್ಷಪಾತವಾಗಿ, ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು, ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಯಾವುದೇ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸದೆ, ಅಕ್ರಮ ಎಸಗಿದ ವರನ್ನು, ಕಾನೂನಿನ ಬಲೆಗೆ ತರಲು ಮುಂದಾಗಬೇಕು.

Leave a Comment

Your email address will not be published. Required fields are marked *

Translate »
Scroll to Top