ಬೆಂಗಳೂರು: ಕೋರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ ಅಂದುಕೊಳ್ಳುವ ಸಂದರ್ಭದಲ್ಲಿ ಸೌತ್ ಆಫ್ರಿಕಾ ಹಾಂಕಾಂಗ್ ದೇಶದಲ್ಲಿ ವೈರಸ್ ಕಂಡು ಬಂದಿದೆ. ಯಾವ ರೀತಿ ಪರಿಣಾಮ ಬೀರುತ್ತೆ ಅಂತ ಗೊತ್ತಿಲ್ಲ. ಆದರೆ ತುಂಬಾ ವೇಗವಾಗಿ ಹರಡುತ್ತೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಇದರ ಬಗ್ಗೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಪ್ರಧಾನಿ ಮೋದಿ ಅವರು ಈಗಾಗಲೇ ಸಭೆ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.