ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ.
‘ಬಿಜೆಪಿಗೆ ಮತ ನೀಡಿ ಮತ್ತು ಶ್ರೀ ನರೇಂದ್ರ ಮೋದಿಜಿಯವರ ಒಲವು ಪಡೆಯಿರಿ, ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ’ ಎಂದು ನಡ್ಡಾರವರು ಹೇಳಿದ್ದು, ಇದು ಜನಪ್ರತಿನಿಧಿ ಕಾಯ್ದೆಯ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171(ಸಿ), 171(ಎಫ್) ಮತ್ತು 123(2) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಅಪರಾಧ ನಂ.51/2023 ರಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬಿಜೆಪಿ ಪರವಾಗಿ ನ್ಯಾಯವಾದಿ ಮತ್ತು ಕಾನೂನು ಪ್ರಕೋಷ್ಠದ ವಿನೋದ್ ಕುಮಾರ್ ಅವರು ಈ ಕೇಸು ರದ್ದು ಮಾಡಲು ಕೋರಿ ಹೈಕೋರ್ಟಿನ ಧಾರವಾಡ ಪೀಠದ ಮುಂದೆ ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಈ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದ್ದಾಗಿ ವಿನೋದ್ ಕುಮಾರ್ ಅವರು ತಿಳಿಸಿದ್ದಾರೆ.
Facebook
Twitter
LinkedIn
WhatsApp
Email
Print