ಮಾ.೨೨ಕ್ಕೆ ವಿಧಾನಸೌಧದ ಮುಂದೆ ಪ್ರತಿಭಟನೆ

ಕುಷ್ಟಗಿ,ಮಾ,20 :- ಕುರಿಗಾಯಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮಾ.೨೨ ರಂದು ಬೆಂಗಳೂರಿನ ವಿಧಾನಸೌಧ ಎದರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕುರುಬ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಬಸವಾರಾಜ ಪೊಲೀಸ್‌ಪಾಟೀಲ್ ಹೇಳಿದರು.

ಗ್ರಾಮದ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಸಂಚಾರಿ ಕುರಿಗಾಯಿ ಲಕ್ಷ್ಮೀ ಎಂಬ ಮಹಿಳೆಯನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿ, ಕೋಲೆ ಗೈದಿರುವುದು ನಾಚಿಕೆ ಗೆಡಿನ ಸಂಗತಿ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ಕೂಡಲೇ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಮುಂದೆ ಕುರಿಗಾಯಿ ಮಹಿಳೆಯರ ಮೇಲೆ ನಡೆಯುವಂತಹ ಈ ರೀತಿಯ ದೌರ್ಜನ್ಯಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಜರುಗಿಸಬೇಕು. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತಗೆದುಕೊಂಡು ಸೂಕ್ತ ತನಿಖೆ ನಡೆಸಿ, ಆರೊಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಮಾ.೨೨ ಮಂಗಳವಾರ ವಿಧಾನಸೌಧದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ಸಂಘ ನಿರ್ಧರಿಸಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಲಕ್ಷ್ಮಿ ಪೊಲೀಸ್‌ಪಾಟೀಲ್ ಮನವಿ ಮಾಡಿದರು.

Leave a Comment

Your email address will not be published. Required fields are marked *

Translate »
Scroll to Top