ಪವರ್ ಶೇರಿಂಗ್, ಬ್ರೇಕ್ ಫಾಸ್ಟ್ ಮೀಟಿಂಗ್‍ನಲ್ಲೇ ಕಳೆದು ಹೋದ ರಾಜ್ಯ ಸರ್ಕಾರ: ಆರ್.ಅಶೋಕ್

Kannada Nadu
ಪವರ್ ಶೇರಿಂಗ್, ಬ್ರೇಕ್ ಫಾಸ್ಟ್ ಮೀಟಿಂಗ್‍ನಲ್ಲೇ ಕಳೆದು ಹೋದ ರಾಜ್ಯ ಸರ್ಕಾರ: ಆರ್.ಅಶೋಕ್

ಬೆಂಗಳೂರು : ಜನಸಾಮಾ ನ್ಯರು, ವಾಹನ ಸವಾರರು ದಿನನಿತ್ಯ ಛೀ ಥೂ ಎಂದು ಸರ್ಕಾರಕ್ಕೆ ಉಗಿಯುತ್ತಿದ್ದರೂ ನಿಮ ದಪ್ಪ ಚರ್ಮದ ಸರ್ಕಾರ ಮಾತ್ರ ಪವರ್ ಶೇರಿಂಗ್, ಬ್ರೇಕ್ ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲೇ ಮುಳುಗಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ 5 ಮಹಾನಗರಗಳಲ್ಲಿ ಕಳೆದ 11 ತಿಂಗಳಲ್ಲಿ ರಸ್ತೆಗುಂಡಿಗಳಿಂದ 558 ಸಾವುಗಳಾಗಿರುವ ಆತಂಕಕಾರಿ ಅಂಕಿ-ಅಂಶ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ, ಅಸಮರ್ಥತೆಗೆ ಅಮಾಯಕ ನಾಗರಿಕರು ನಡುರಸ್ತೆಯಲ್ಲೇ ಪ್ರಾಣ ಬಿಡುವ ದುಸ್ಥಿತಿ ಎದುರಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ರಾಜ್ಯದ ಉದ್ದಗಲಕ್ಕೂ ಯಮಸ್ವರೂಪಿ ಗಂಡಾಗುಂಡಿಗಳದ್ದೇ ಹಾವಳಿಯಾಗಿದೆ. ಇಡೀ ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿವೆ. ಇದು ನಿಮ ದಪ್ಪ ಚರ್ಮದ ಸರ್ಕಾರಕ್ಕೆ ಇದು ಅರ್ಥವಾಗುತ್ತಿಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.
ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ ಎಂದು ಟೀಕಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೂ ಎಷ್ಟು ದಿನ ಬೇಕು ಸ್ವಾಮಿ? ಹೈಕಮಾಂಡ್ ಏಜೆಂಟ್ ಕೆ.ಸಿ.ವೇಣುಗೋಪಾಲ್ ಅವರ ಆದೇಶಕ್ಕೆ ಕಾಯ್ತಾ ಇದೀರಾ? ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲೆಂದು ತಿಚಿಣ ಮಾಡ್ತಾ ಇದೀರಾ? ಎಂದು ಪ್ರಶ್ನಿಸಿದ್ದಾರೆ.
ರೈತರ ಕಷ್ಟಕ್ಕೆ ಸ್ಪಂದಿಸದ ನಿಮಂಥವರಿಗೆ ಯಾಕೆ ಸ್ವಾಮಿ ಅಧಿಕಾರ, ಕುರ್ಚಿ? ಜನ ಈ ನಾಲಾಯಕ್ ಸರ್ಕಾರವನ್ನು ಹಾದಿಬೀದಿಯಲ್ಲಿ ಛೀ ಥೂ ಅಂತ ಉಗಿಯುತ್ತಿದ್ದಾರೆ, ಶಾಪ ಹಾಕುತ್ತಿದ್ದಾರೆ. ಅನ್ನದಾತರು ದಿನನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿರುವ ನಿಮ ಕಾಂಗ್ರೆಸ್ ಪಕ್ಷಕ್ಕೆ ಅವರ ನೋವಿನ ಶಾಪ ತಟ್ಟದೇ ಇರದು ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";