ಬೆಂಗಳೂರಿನಲ್ಲಿ ಆಗಸ್ಟ್ 4ರಂದು ರಾಹುಲ್ ಗಾಂಧಿ ಪಾದಯಾತ್ರೆ!

ಬೆಂಗಳೂರಿನಲ್ಲಿ ಆಗಸ್ಟ್ 4ರಂದು ರಾಹುಲ್ ಗಾಂಧಿ ಪಾದಯಾತ್ರೆ!

Kannada Nadu
ಬೆಂಗಳೂರಿನಲ್ಲಿ ಆಗಸ್ಟ್ 4ರಂದು ರಾಹುಲ್ ಗಾಂಧಿ ಪಾದಯಾತ್ರೆ!

Bengaluru: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Siddaramaiah, D K Shivakumar Meet Rahul Gandhi At 10 Janpath - Oneindia News

ಬೆಂಗಳೂರು: ಆಗಸ್ಟ್ 4ರಂದು ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿಗೆ  ಆಗಮಿಸಲಿದ್ದಾರೆ. ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Karnataka: Did Rahul Gandhi target Siddaramaiah for loss of power? - India  Today

ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಘಟಾನಘಟಿ ನಾಯಕರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 4ನೇ ತಾರೀಕಿಗೆ ಬರ್ತಾರೆ ಅನ್ನೋದಿದೆ. ಅಧಿಕಾರಿಗಳ ಬಳಿ ಮಾತಾಡಬೇಕು. ಸಿಎಂ ಬಳಿ ಮಾತಾಡ್ತೇನೆ ಎಂದರು. ದರ್ಶನ್ ಫ್ಯಾನ್ಸ್ ವಿಚಾರದಲ್ಲಿ ರಮ್ಯಾಗೆ ಕೆಪಿಸಿಸಿ ಮಹಿಳಾ ಘಟಕ ಬೆಂಬಲ ಘೋಷಣೆ ಹಿನ್ನೆಲೆಯಲ್ಲಿ, ನಮಗೆ ಯಾರು ಬೆಂಬಲ ಕೊಡ್ತಾರೋ, ಅವರಿಗೆ ನಾವೂ ಬೆಂಬಲ ಕೊಡ್ತೇವೆ ಎಂದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";