ತಲೈವ ರಜನಿಕಾಂತ್ ಚಿತ್ರ ಜೈಲರ್ ಆಗಸ್ಟ್ 10ಕ್ಕೆ ಕನ್ನಡದಲ್ಲೂ ಬಿಡುಗಡೆ

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ.  ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ.  ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದಾರೆ. 

ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದವಿದೆ. ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top