ಬ್ರಿಟಿಷರ ವಿರುದ್ಧ ದಂಗೆ ಎದ್ದ ದಿಟ್ಟ ಮಹಿಳೆ ರಾಣಿ ಚೆನ್ನಮ್ಮ: ಮೇಯರ್ ಡಿ.ತ್ರಿವೇಣಿ

ಬಳ್ಳಾರಿ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ದಂಗೆಯನ್ನು ಮುನ್ನಡೆಸಿದ ಮೊದಲ ಭಾರತೀಯರಲ್ಲಿ ಕಿತ್ತೂರಿನ ರಾಣಿ ಚೆನ್ನಮ್ಮ ಅವರು ಒಬ್ಬರು ಎಂದು ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 

ಚೆನ್ನಮ್ಮ ಅವರು, 23 ಅಕ್ಟೋಬರ್ 1778 ರಂದು ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವಂತೆ ಮಾಡಿ, ಅನೇಕ ಮಹಿಳೆಯರಲ್ಲಿ ಧೈರ್ಯ ತುಂಬಿದ ವೀರ ಮಹಿಳೆಯೂ ಆದ ಅವರು ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು ಎಂದೇ ಗೌರವಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯೋತ್ಸವದ ವಿಶೇಷ ಉಪನ್ಯಾಸದಲ್ಲಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯಲ್ಲಿ ಕಿತ್ತೂರಿನ ರಾಣಿ ಚೆನ್ನಮ್ಮಾಜಿಯವರು ತಮ್ಮ ಅಸಾಧಾರಣ ಧೈರ್ಯ ಸಾಹಸಗಳಿಂದ ಅಜರಾಮರರಾಗಿದ್ದಾರೆ. ಬ್ರಿಟಿಷರ ಕುತಂತ್ರವನ್ನೆದುರಿಸಿ ಅವರ ವಿರುದ್ಧ ಹೋರಾಡಿ ಯುದ್ಧ ಗೆದ್ದ ಅವರ ಪರಾಕ್ರಮದ ಬಗ್ಗೆ ಇವತ್ತಿಗೂ ನಮ್ಮ ನಾಡಿನ ಮೂಲೆಮೂಲೆಗಳಲ್ಲೂ ಅವರನ್ನು ಸ್ಮರಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರದ ಮೋಕಾ ರಸ್ತೆಯ ಕೆಇಬಿ ವೃತ್ತದ ಬಳಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುತ್ಥಳಿ ಪ್ರತಿಷ್ಠಾಪನೆ ಮಾಡಿ, ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಮಹಾನಗರ ಪಾಲಿಕೆ ಸದಸ್ಯ ಪಿ.ಗಾದೆಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪನಿರ್ದೇಶಕ ಚೋರನೂರು ಕೊಟ್ರಪ್ಪ, ಮುಖಂಡರಾದ ಶಿವಕುಮಾರ, ಕಲ್ಲುಕಂಭ ಪಂಪಾಪತಿ, ಡಾ.ಸೋಮಶೇಖರ ರೆಡ್ಡಿ, ಹಾವಿನಾಳ ಶರಣಪ್ಪ, ಅಸುಂಡಿ ನಾಗರಾಜ, ಕೋಳೂರು ಚಂದ್ರೇಗೌಡ, ಮುಕ್ಕಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಗಮನ ಸೆಳೆದ ಮೆರವಣಿಗೆ, ಕಲಾತಂಡ:

            ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಲಾ ತಂಡಗಳು ಗಮನಸೆಳೆದವು.

            ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು, ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

 

            ಮೆರವಣಿಗೆಯು ನೂತನ ಜಿಲ್ಲಾಡಳಿತ ಭವನದಿಂದ ಆರಂಭವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣದ ವೇದಿಕೆ ಕಾರ್ಯಕ್ರಮಕ್ಕೆ ತಲುಪಿತು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top