ಬೆಂಗಳೂರು : ತಮಿಳುನಾಡಿನಲ್ಲಿ ಡಿಎಂಕೆ ಸರಕಾರ ಇರುವುದರಿಂದ ‘ಇಂಡಿಯ ಒಕ್ಕೂಟ’ವನ್ನು ಬಲಪಡಿಸಲು ನಿತ್ಯ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರನ್ನು ಕರ್ನಾಟಕದಿಂದ ಬಿಡಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಂಚೆಯೇ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಬೇಕಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಪ್ರೀಂ ಕೋರ್ಟನ್ನು ಅಪ್ರೋಚ್ ಮಾಡದೆ ತಮಿಳುನಾಡನ್ನು ತೃಪ್ತಿಪಡಿಸಲು ನೀರು ಹರಿಸಿರುವುದು ಅಕ್ಷಮ್ಯ ಅಪರಾಧ. ಸುಪ್ರೀಂ ಕೋರ್ಟಿಗೆ ಈ ವಿಚಾರವನ್ನು ಮನವರಿಕೆ ಮಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ಷೇಪಿಸಿದರು.