ಪಟ್ಟಣದಲ್ಲಿ ಗಣರಾಜ್ಯೋತ್ಸವ ಆಚರಣೆ

ಮರಿಯಮ್ಮನಹಳ್ಳಿ, 26 : ಪಟ್ಟಣದ ಒಂದನೇ ವಾರ್ಡನಲ್ಲಿ ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ ಕರ್ನಾಟಕ ಇವರಿಂದ ಬುಧವಾರ ಬೆಳಿಗ್ಗೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿಜೇತ ಮಕ್ಕಳಿಗೆ ಪುಸ್ತಕ, ಪೆನ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ರಾಜ್ಯ ಪ್ರಶಸ್ತಿ ಪುರಸ್ಕೃತೆ ಮಾಳಗಿ ಮಂಜುಳ, ವಕೀಲರಾದ ಎಲ್. ಮಲ್ಲಿಕಾರ್ಜುನ, ಪಟ್ಟಣ ಪಂಚಾಯಿತಿ ನೂತನ ಸದಸ್ಯ ರಾದ ಎಲ್. ವಸಂತ ಕುಮಾರ್, ಎಲ್. ಪರುಶುರಾಮ, ಮರಡಿ ಸುರೇಶ ಇದ್ದರು. ಹಾಗೂ ಪಟ್ಟದ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

Leave a Comment

Your email address will not be published. Required fields are marked *

Translate »
Scroll to Top