ನಾಳೆಯೇ S SSLC ಫಲಿತಾಂಶ ಪ್ರಕಟ, ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ ೧೦.೩೦ಕ್ಕೆ ರ‍್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನರ‍್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ರಿಸಲ್ಟ್ ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ.

ಬೆಂಗಳೂರು: 2023-24ನೇ ಸಾಲಿನ SSಐಅ ಪರೀಕ್ಷೆಯ ಫಲಿತಾಂಶಕ್ಕೆ ( Karnataka sslc exam result 2024 ) ಸಮಯ ನಿಗದಿಯಾಗಿದೆ. ನಾಳೆ (ಮೇ 09) ಬೆಳಗ್ಗೆ 10.30   ಕ್ಕೆ ರ‍್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನರ‍್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ರ‍್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನರ‍್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರುಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ 8.69 ಲಕ್ಷ ವಿದ್ಯರ‍್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-೧ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು ೪,೨೮,೦೫೮ ವಿದ್ಯರ‍್ಥಿನಿಯರು ಪರೀಕ್ಷೆ ಬರೆದಿದ್ದು, ನಾಳೆ ಇವರ ಭವಿಷ್ಯ ನರ‍್ಧಾರವಾಗಲಿದೆ.

 

ಪತ್ರಿಕಾ ಪ್ರಕಟಣೆಯಲ್ಲೇನಿದೆ?

ರ‍್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನರ‍್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮರ‍್ಚ್/ಏಪ್ರಿಲ್ 2024ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೧ ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕರ‍್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-೧ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ರ‍್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನರ‍್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-೫೬೦೦೦೩ ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ೨೦೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ ಎಂದು ತಿಳಿಸಿದೆ.

ಎಸ್ಎಸ್ಎಲ್ಸಿ ರಿಸಲ್ಟ್ ಯಾವ್ ವೆಬ್ಸೈಟ್ನಲ್ಲಿ ದೊರೆಯುತ್ತದೆ?

ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ರ‍್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?

ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ

ಕಳೆದ ರ‍್ಷ, ರ‍್ನಾಟಕ ಬರ‍್ಡ್ ಎಸ್ಎಸ್ಎಲ್ಸಿ ಫಲಿಶಾಂಶವನ್ನು ಮೇ ೦೮ ರಂದು ಘೋಷಿಸಿತ್ತು. ಒಟ್ಟಾರೆ ಉತ್ತರ‍್ಣ ಪ್ರಮಾಣ ಶೇ ೮೩.೮೯ ರಷ್ಟು ದಾಖಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯರ‍್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯರ‍್ಥಿಗಳ ನೋಂದಣಿಯಲ್ಲಿ 8,10,368 ರ‍್ಕಾರಿ ಶಾಲಾ ವಿದ್ಯರ‍್ಥಿಗಳು, 18,225 ಖಾಸಗಿ ವಿದ್ಯರ‍್ಥಿಗಳು ಹಾಗೂ 41,375 ಪುನರಾರ‍್ತಿತ ವಿದ್ಯರ‍್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಅನುತ್ತರ‍್ಣರಾದರೆ ಮುಂದೇನು?

 

ನಾಳೆ ಫಲಿತಾಂಶದಲ್ಲಿ ಅನುತ್ತರ‍್ಣರಾದ ವಿದ್ಯರ‍್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯರ‍್ಥಿಗಳು ಪರೀಕ್ಷೆಯನ್ನು ೩ ಬಾರಿ ಬರೆಯಬಹುದು. ಈ ಹಿಂದೆ ಅನುತ್ತರ‍್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ ೩ ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-೨, ಪರೀಕ್ಷೆ-೩ ಬರೆಯಬಹುದು. ೩ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-೧ ರಲ್ಲಿ ಅನುತ್ತರ‍್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-೨ ತೆಗೆದುಕೊಳ್ಳಬಹುದು. ಪರೀಕ್ಷೆ-೨ ಅನುತ್ತರ‍್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-೩ ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

Facebook
Twitter
LinkedIn
Telegram
WhatsApp
Print
Email

Leave a Comment

Your email address will not be published. Required fields are marked *

Translate »
Scroll to Top