ಸೈಫ್ ಆಲಿಖಾನ್ ಚಾಕು ಇರಿತ ಪ್ರಕರಣ: ಮುಖ್ಯ ಆರೋಪಿ ಬಾಂಗ್ಲಾ ಪ್ರಜೆ ಬಂಧನ

Kannada Nadu
ಸೈಫ್ ಆಲಿಖಾನ್ ಚಾಕು ಇರಿತ ಪ್ರಕರಣ: ಮುಖ್ಯ ಆರೋಪಿ ಬಾಂಗ್ಲಾ ಪ್ರಜೆ ಬಂಧನ

ಮುಂಬೈ:ನಟ ಸೈಫ್ ಅಲಿ ಖಾನ್‌ಗೆ ಚಾಕು ತಿವಿದು ಹತ್ಯಾ ಪ್ರಯತ್ನ ಮಾಡಿದ್ದ ಪ್ರಮುಖ ಆರೋಪಿಯನ್ನು ಭಾನುವಾರ ಬೆಳ್ಳಂಬೆಳಿಗ್ಗೆ ಮುಂಬೈ ಬಳಿಯ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಾಂಗ್ಲಾದೇಶದವನಾಗಿದ್ದು, ಕಳ್ಳತನದ ಉದ್ದೇಶದಿಂದ ನಟನ ಮನೆಗೆ ಪ್ರವೇಶಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಂಧಿತನ ಬಳಿ ಭಾರತಕ್ಕೆ ಸಂಬAಧಿಸಿದ ಯಾವುದೇ ಆಧಾರ್ ಕಾರ್ಡ್ ಅಥವಾ ಇನ್ನಿತರೆ ದಾಖಲೆಗಳು ಪತ್ತೆಯಾಗಿಲ್ಲ. ಆರೋಪಿ ಭಾರತಕ್ಕೆ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ನಿಂದ ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ. ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಅಲಿಯಾಸ್‌ಗಳನ್ನು ಆತ ಬಳಸುತ್ತಿದ್ದ. ಆರೋಪಿಯ ಹೆಸರು ಮೊಹಮ್ಮದ್ ಷರೀಫುಲ್ಲಾ ಇಸ್ಲಾಂ ಶೆಹಜಾದ್ ಎಂದು ಮಾಹಿತಿ ಹಂಚಿಕೊAಡಿದ್ದಾರೆ ಡಿಸಿಪಿ ದೀಕ್ಷಿತ್ ಗೆಡಾಮ್.
ಪ್ರಾಥಮಿಕ ವಿಚಾರಣೆ ವೇಳೆ ಆರೋಪಿಯು ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದು, ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ ಆ ನಂತರ ವಶಕ್ಕೆ ಪಡೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈಗ ಬಂಧನವಾಗಿರುವ ಆರೋಪಿ ಮುಂಬೈನ ಪಬ್ ಒಂದರಲ್ಲಿ ಕೆಲಸ ಮಾಡುತ್ತಿದ್ದನಂತೆ. ಬಾಂಗ್ಲಾದೇಶದಿAದ ಅಕ್ರಮವಾಗಿ ಬಂದಿರುವ ಈತ ಇಲ್ಲಿ ಹೆಸರು ಬದಲಾವಣೆ ಮಾಡಿಕೊಂಡು ಓಡಾಡುತ್ತಿದ್ದನಂತೆ.
ಕಳೆದ ಗುರುವಾರ ನಸುಕಿನ ಜಾವ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ವೆಸ್ಟ್ ಮನೆಯಲ್ಲಿ ಕಳ್ಳತನ ಯತ್ನದ ವೇಳೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. 54 ವರ್ಷದ ನಟನ ಮನೆಯಲ್ಲಿ ನಡೆದ ದಾಳಿಯಲ್ಲಿ ಅವರ ಕುತ್ತಿಗೆ ಮತ್ತು ಬೆನ್ನುಮೂಳೆಯ ಬಳಿ ಸೇರಿದಂತೆ ಹಲವು ಭಾಗಗಳಿಗೆ ಇರಿತದ ಗಾಯಗಳಾಗಿವೆ. ಅವರನ್ನು ತಕ್ಷಣವೇ ಆಟೋರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಿ ಅಪಾಯದಿಂದ ಪಾರಾಗಿದ್ದಾರೆ.
ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ದಾಳಿಕೋರ ಸೈಫ್ ಅಲಿ ಖಾನ್ ಅವರ ಕಿರಿಯ ಮಗ ಜಹಾಂಗೀರ್ ಅವರ ಕೋಣೆಗೆ ಪ್ರವೇಶಿಸಿದಾಗ ಮನೆಯ ಸಹಾಯಕರು ನೋಡಿದ್ದಾರೆ. ನಂತರ ತೀವ್ರ ಗದ್ದಲ ನಡೆದು ಮನೆಯವರೆಲ್ಲಾ ಭಯಭೀತರಾದರು. ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಜೆಹ್ ಕೋಣೆಗೆ ಧಾವಿಸಿದರು ಎಂದು ದೂರುದಾರರು ತಿಳಿಸಿದ್ದಾರೆ. ಸೈಫ್ ಒಳನುಗ್ಗುವವರನ್ನು ತಡೆದಾಗ ಗಲಾಟೆಯಲ್ಲಿ ಗಾಯಗೊಂಡಿದ್ದಾರೆ.
ನಿನ್ನೆ ಮುಂಬೈ ಪೊಲೀಸರಿಗೆ ಹೇಳಿಕೆ ನೀಡಿದ ಕರೀನಾ ಕಪೂರ್ ಖಾನ್, ಒಳನುಗ್ಗಿದವನು ಆಕ್ರಮಣಕಾರಿಯಾಗಿ ವರ್ತಿಸಿದ್ದನು. ಆದರೆ ತೆರೆದ ಸ್ಥಳದಲ್ಲಿ ಇರಿಸಲಾಗಿದ್ದ ಆಭರಣಗಳನ್ನು ಮುಟ್ಟಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.ಈ ಮಧ್ಯೆ ಸೈಫ್ ಆಲಿಖಾನ್ ಆರೋಗ್ಯ ಸುಧಾರಿಸುತ್ತಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಲೀಲಾವತಿ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ ಹೇಳಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";