ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮುಖ್ಯಮಂತ್ರಿಗಳಿಂದ‌ ಮಾಲಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ  ದಿನಾಚರಣೆ-2023 ಅಂಗವಾಗಿ ಶನಿವಾರ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ  ಉಲ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ತದನಂತರ‌ ನೆರೆದ‌ ಜನಸ್ತೋಮದತ್ತ ಕೈಬೀಸಿ ಕಲ್ಯಾಣ ಕರ್ನಾಟಕ ಉತ್ಸವದ ಶುಭಕೋರಿದರು.

 

ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪಟೇಲ್‌ ಅವರ ಮೂರ್ತಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, .ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಸೇರಿ ಜಿಲ್ಲೆಯ ಇತರೆ ಶಾಸಕರು, ಜನಪ್ರತಿನಿಧಿಗಳೊಂದಿಗೆ ಮಾಲಾರ್ಪಣೆ‌ ಮಾಡಿ ಗೌರವ‌ ನಮನ‌ ಸಲ್ಲಿಸಿದರು.

ಈ‌ ಸಂದರ್ಭದಲ್ಲಿ ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿ‌ಗಳಾದ ಶಶೀಲ‌ ನಮೋಶಿ,  ತಿಪ್ಪಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವಿಶಾಕ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್ ಮತ್ತಿತರಿದ್ದರು.

ಇದಕ್ಕು ಮುನ್ನ ಹೈದ್ರಾಬಾದ್ ಕರ್ನಾಟಕ ಇತಿಹಾಸ ರಚನಾ‌ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಣ್ಮಣ ದಸ್ತಿ ಅವರು, ಹೈದ್ರಾಬಾದ ಕರ್ನಾಟಕ ವಿಮೋಚನೆ ಹೋರಾಟ ಕುರಿತು ಮಾತನಾಡಿದರು.

 

ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ ಮಾಡಲು ಆಗಮಿಸಿದ ಸಿ.ಎಂ. ಅವರಿಗೆ ಕಲಾವಿದರು ಡೊಳ್ಳು, ವೀರಗಾಸೆ, ನಂದಿ ಧ್ವಜ,‌ ಲಂಬಾಣಿ ನೃತ್ಯ, ಗರುಡ ಗೊಂಬೆ, ಕರಡಿ‌ ಮಜಲು, ಕಣಿ ಹಲಗಿ, ಕೊಂಬು ಕಹಳೆಯೊಂದಿಗೆ ಭರ್ಜರಿ ಸ್ವಾಗತ ಕೋರಿದರು.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top