ಎಸ್.ಸಿ. – ಎಸ್.ಟಿ. ಸಮುದಾಯಗಳಿಗೆ ರಾಜ್ಯ ಸರ್ಕಾರ ನೀಡಿದ ರೂ. 28,000 ಕೋಟಿ ಅನುದಾನ ಅತ್ಯಂತ ಮಹತ್ತರ ವಾಗಿದೆ

ಎಸ್.ಸಿ. – ಎಸ್.ಟಿ. ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ರೂ. 28,000 ಕೋಟಿ ಅನುದಾನವನ್ನು ಪರಿಶಿಷ್ಟರ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಅನುಮೋದಿಸಿರುವುದು ಒಂದು ಮಹತ್ತರ ನಿರ್ಧಾರ ಎಂದು ಬಿಜೆಪಿ ಎಸ್.ಸಿ. ಮೋರ್ಚಾದ ರಾಜ್ಯ ಅಧ್ಯಕ್ಷ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಸ್ವಾಗತಿಸಿದ್ದಾರೆ. ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು ಅನುದಾನ ವಿಷಯದಲ್ಲಿ ಕೇವಲ ಬಾಯಿ ಮಾತನ್ನಷ್ಟೆ ಆಡುತ್ತಿದ್ದು, ಎಸ್.ಸಿ. – ಎಸ್.ಟಿ. ಸಮುದಾಯವನ್ನು ಕೇವಲ ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್. ಬೊಮ್ಮಾಯಿ ಮತ್ತು ಸಮಾಜ ಕಲ್ಯಾಣ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನ ನೀಡಿಕೆ ನಿರ್ಧಾರ ಅತ್ಯಂತ ಪ್ರಮುಖವಾಗಿದೆ ಎಂದು ಶ್ರೀ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ನೈಜ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ಲಭಿಸುವಂತೆ ಗರಿಷ್ಠ ಪ್ರಯತ್ನ ಮಾಡುತ್ತಿದ್ದು, ಇದರಿಂದಾಗಿ ಸಮುದಾಯಗಳು ಬಿಜೆಪಿ ಪರ ಒಲವು ತೋರಿಸಿವೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಲಕಚ್ಚಲಿದೆ ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top