ರಾಜ್ಯದಾದ್ಯಂತ ನವೆಂಬರ್ 24ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ

Kannada Nadu
ರಾಜ್ಯದಾದ್ಯಂತ  ನವೆಂಬರ್ 24ರವರೆಗೆ ಅಲ್ಲಲ್ಲಿ  ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಾದ್ಯಂತ  ನವೆಂಬರ್ 24ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆ ಚಳಿ ಮತ್ತು ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರೆಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುವ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದು ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 23ರಂದು ಕೊಪ್ಪಳ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.ಇನ್ನು ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 24ರವರೆಗೆ ಮಳೆಯಾಗಲಿದೆ. 25ರಿಂದ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.ಬೆಂಗಳೂರಿನಲ್ಲಿ ಕೆಲವೆಡೆ ಮುಂಜಾನೆ ಮಂಜು ಇರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";