ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಂದಿನಂತೆಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಈ ಬಾರಿ ಒಟ್ಟು 6,98,378 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 5,52,690 ಮಂದಿ ತೇರ್ಗಡೆಯಾಗಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ 97.37 ಸಾಧನೆ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ
ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ದಿನಾಂಕ: 01-03-2024 ರಿಂದ 22-03-2024 ರವರೆಗೆ ಒಟ್ಟು 1124 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 70 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 25/03/2024 ರಿಂದ 03/04/2024 ರವರೆಗೆ 27,650 ಮೌಲ್ಯಮಾಪಕರಿಂದ ನಡೆಸಲಾಯಿತು.
ಪರೀಕ್ಷೆಗೆ ಅರ್ಹರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: 6,98378
ಎಲ್ಲಾ ವಿಷಯಗಳಿಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 17,299 ರಷ್ಟಿದ್ದರೆ, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 6,81,079 ಇದೆ. ಇದರಲ್ಲಿ ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 5,52,690 ಆಗಿದ್ದು, 2024ರಲ್ಲಿ ಶೇಕಡವಾರು ಉತ್ತೀರ್ಣತಾ ಪ್ರಮಾಣ 81.15% ಇದೆ ಎಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇನ್ನೂ ಫಲಿತಾಂಶವನ್ನು ಕಾಲೇಜುಗಳಲ್ಲಿ ಇಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸಲಿದ್ದಾರೆ.
ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?
ಹಂತ 1: ನೀವು https://karresults.nic.in/ ಎಂದು ಗೂಗಲ್‌ನಲ್ಲಿ ಸರ್ಚ್ ಮಾಡಿ ಪಿಯುಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)
ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು
ತುಮಕೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ
ತುಮಕೂರು ಜಿಲ್ಲೆಯು ಶೇ.81.03ರಷ್ಟು ಫಲಿತಾಂಶ ಪಡೆದಿದ್ದು, ರಾಜ್ಯ ಮಟ್ಟದಲ್ಲಿ 20ನೇ ಸ್ಥಾನದಲ್ಲಿದೆ. ರಾಜ್ಯದ ಒಟ್ಟಾರೆ ಫಲಿತಾಂಶ ಶೇ.89.59ರಷ್ಟಿದೆ. ತುಮಕೂರು ನಗರದ ವಿದ್ಯಾನಿಧಿ ಪಿಯು ಕಾಲೇಜಿನ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 597 ಅಂಕಗಳನ್ನು ಪಡೆದಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕವಿತ
ಅಖಂಡ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜಿನ ಕಲಾ ವಿಭಾಗದ ಕವಿತ 596 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೂವರಲ್ಲಿ ಒಬ್ಬರಾಗಿದ್ದಾರೆ. ಈ ಕಾಲೇಜಿನಲ್ಲಿ ಕಳೆದ 9 ವರ್ಷದಿಂದ ಮೊದಲ ಸ್ಥಾನವನ್ನು ವಿದ್ಯಾರ್ಥಿಗಳು ಪಡೆಯುತ್ತಲೇ ಬಂದಿದ್ದಾರೆ.
ಜಿಲ್ಲಾವಾರು ಫಲಿತಾಂಶ ಹೀಗಿದೆ ನೋಡಿ.