ಬೆಂಗಳೂರು: ನಮ್ಮ ನಡುವಿನ ಹಿರಿಯ ಲೇಖಕ, ಚಿಂತಕ, ಹೋರಾಟಗಾರ ಡಿ.ಎಸ್.ನಾಗಭೂಷಣ್ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶೋಕಸಂದೇಶ. ಅನ್ಯಾಯ, ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ.

ಅವರ ಪತ್ನಿ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಡಿ.ಎಸ್.ನಾಗಭೂಷಣ್ ಅವರ ‘ಗಾಂಧಿ ಕಥನ’ ವನ್ನು ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು. ಲೋಹಿಯಾ ಚಿಂತನೆಯ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ ಸದಾ ಹಸಿರಾಗಿರುತ್ತಾರೆ.