ಹೊಳೆ ನರಸೀಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.
ಸಂತ್ರಸ್ತ ಮಹಿಳೆಯೊಂದಿಗೆ ಐದು ವಾಹನಗಳಲ್ಲಿ ಬಂದ ಎಸ್ ಐಟಿ ತಂಡಕ್ಕೆ ಹಾಸನ ಎಎಸ್ ಪಿ ತಮ್ಮಯ್ಯ ಅವರನ್ನೊಳಗೊಂಡ ಸ್ಥಳೀಯ ಪೊಲೀಸರು ಸಾಥ್ ನೀಡಿದರು. ರೇವಣ್ಣ ಅವರ ನಿವಾಸದಲ್ಲಿ ತಮ್ಮ ಮೇಲೆ ಲೈಂಗಿಕ ದರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಮಹಜರು ನಡೆಸಲಾಯಿತು.ಅಧಿಕಾರಿಗಳು ಮಹಜರು ಪ್ರಕ್ರಿಯೆ ವಿಡಿಯೋ ಮಾಡಿದರು. ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡರು. ಸ್ಥಳ ಮಹಜರು ವೇಳೆಯಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಮನೆಯಲ್ಲಿಯೇ ಇದ್ದರು. ರೇವಣ್ಣ ಪರ ವಕೀಲರು, ಜೆಡಿಎಸ್ ನಾಯಕರು ಸ್ಥಳದಲ್ಲಿ ಹಾಜರಿದ್ದರು.
Facebook
Twitter
LinkedIn
Telegram
WhatsApp
Email
Print