ಬೆಂಗಳೂರು,ಫೆ,19 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಇಂದು ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ , ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಶಾಸಕ ಎಂಜಿ ಮೂಳೆ, ಮರಾಠಾ ಸಮುದಾಯದ ಮುಖಂಡ ಮನೋಜ ಕುಮಾರ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

