ಶಿವಣ್ಣ-ಪ್ರಭುದೇವ ಚಿತ್ರ ಕರಟಕ ದಮನಕ ಈ ಹೆಸರೇ ಯಾಕೆ ? ಯೋಗರಾಜ್ ಭಟ್ ಹೇಳಿದ್ದೇನು ?

ಹ್ಯಾಟ್ರಿಕ್ ಹೀರೋ ಶಿವಣ್ಣ ಮತ್ತು  ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ  ‘ಕರಟಕ ದಮನಕ’ ಚಿತ್ರದ ಎಕ್ಸ್ ಕ್ಲೂಸಿವ್ ಮೊದಲ ಝಲಕ್ ಬಿಡುಗಡೆಯಾಗಿದೆ.

“ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ‘ಕರಟಕ’ ಇನ್ನೊಂದರ ಹೆಸರು ‘ದಮನಕ’. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. 

ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ…!!

ಎಚ್ಚರಿಕೆ ! ಎಂಬ ಈ ಬರಹದ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.

     ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

     ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಅವರೊಂದಿಗೆ ಚಿತ್ರಕಥೆಯಲ್ಲಿ ಭಾಗಿಯಾಗಿದ್ದಾರೆ ಸುಬ್ರಹ್ಮಣ್ಯ.

     ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top