ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರು ಇಂದು ಕೋಲಾರ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾರಿಸಿ ಜಿಲ್ಲೆಯ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದರು. ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.
ಕೋಲಾರ ಸಂಸದರಾದ ಶ್ರೀ ಎಸ್. ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್, ಗೋವಿಂದ ರಾಜ್ ಜಿಲ್ಲಾಧಿಕಾರಿ ಅಕ್ರಮ ಪಾಷಾ, ಜಿಲ್ಲಾ ಪಂಚಾಯತ ಸಿಇಒ ಪದ್ಮ ಬಸವಂತಪ್ಪ, ಜಿಲ್ಲಾ ಪೋಲೀಸ್ ವರಿಷ್ಷಾಧಿಕಾರಿ ಎಂ.ನಾರಾಯಣ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಗಣ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ಕೋಲಾರ ವಿಧಾನ ಸಭಾ ಸದಸ್ಯರಾದ ಶ್ರೀ ಕೂತ್ತೂರು ಮಂಜುನಾಥ್ ವಹಿಸಿದ್ದರು. 77 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೋಲಾರ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ)ಅವರು ರಾಷ್ಟ್ರ ಧ್ವಜವನ್ನು ಹಾರಿಸಿದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪಗಳ ಸುರಿಮಳೆ… ಅಲ್ಲಿ ನೆರೆದಿದ್ದ ಎಲ್ಲರೂ ಕೆಲ ಕ್ಷಣಗಳ ಕಾಲ ರೋಮಾಂಚನದಿಂದ ಪುಳಕ ಗೊಂಡರು.