ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸಿದ: ಸಿದ್ದರಾಮಯ್ಯ

ಬೆಂಗಳೂರು:  ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ
ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಧನ್ಯವಾದ ತಿಳಿಸಿದ್ದಾರೆ.

 

ಎನ್‌ಡಿಆರ್‌ಎಫ್‌ ನಿಯಮವಾಳಿ
ಪ್ರಕಾರ, ರಾಜ್ಯಕ್ಕೆ 18,171 ಕೋಟಿ ರೂ. ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3498 ಕೋಟಿ ರೂ.ಗೆ
ಅನುಮೋದನೆ ನೀಡಿ, 3454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು ಎಂದಿದ್ದಾರೆ. 
ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆವು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.

 

ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್‌ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡಿದರು.

 

ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸಿದರು.

 

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂ.ನಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ 18,171 ಕೋಟಿ ರೂ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು 3498.98 ಕೋಟಿ ರೂ. ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top