ಬೆಂಗಳೂರು,ಫೆ,19 : ಹಿರಿಯ ನಟ ರಾಜೇಶ್ ಅವರ ಅಗಲಿಕೆಯಿಂದಾಗಿ ಕನ್ನಡ ಚಿತ್ರರಂಗ ಅದ್ಭುತ ಕಲಾವಿದರೊಬ್ಬರನ್ನು ಕಳೆದುಕೊಂಡಿದೆ. ನಾಯಕ ನಟರಾಗಿ ಮಾತ್ರವಲ್ಲದೆ ಪೋಷಕ ನಟರಾಗಿಯೂ ಬೆಳ್ಳಿ ತೆರೆಯನ್ನು ಬೆಳಗಿದ ರಾಜೇಶ್ ಅವರು ನನಗೆ ಚಿರಪರಿಚಿತರು. ಹಲವಾರು ಸಂದರ್ಭಗಳಲ್ಲಿ ನಾವು ಭೇಟಿಯಾಗಿದ್ದೆವು.

ರಂಗಭೂಮಿ ಮೂಲಕ ಕಲಾ ಜಗತ್ತಿಗೆ ಪ್ರವೇಶ ಪಡೆದ ಮುನಿಚೌಡಪ್ಪ ಅವರಿಗೆ ರಂಗಭೂಮಿ ಕೊಟ್ಟ ಹೆಸರು ವಿದ್ಯಾಸಾಗರ್. ರಂಗಭೂಮಿ ಮೂಲಕವೇ ಬೆಳ್ಳೆ ತೆರೆಗೆ ಬಂದು ರಾಜೇಶ್ ಆಗಿ ಖ್ಯಾತಿ ಪಡೆದರು. ನಾಯಕ ನಟರಾಗಿ ಮತ್ತು ಪೋಷಕ ಪಾತ್ರಗಳಲ್ಲೂ ಮಿಂಚಿ ಮೂರು ತಲೆ ಮಾರಿನ ಕನ್ನಡಿಗರಿಗೆ ಪರಿಚಿತರಾಗಿದ್ದರು. ಒಬ್ಬೊಬ್ಬರಾಗಿ ಹಿರಿಯ ಕಲಾವಿದರನ್ನು ನಮ್ಮ ಕಲಾ ಜಗತ್ತು ಕಳೆದುಕೊಳ್ಳುತ್ತಿರುವುದು ಬಹಳ ದುಃಖದ ಸಂಗತಿ. ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅಭಿಮಾನಿಗಳಿಗೆ, ಕುಟುಂಬಕ್ಕೆ ಮತ್ತು ಬಂಧು ಮಿತ್ರರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

