ಪತ್ನಿಯ ಗುಂಡಿಟ್ಟು ಕೊಂದ ಪಾಪಿ ಪತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣು

Kannada Nadu
ಪತ್ನಿಯ ಗುಂಡಿಟ್ಟು ಕೊಂದ ಪಾಪಿ ಪತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣು

ಬೆಂಗಳೂರು:  ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಲ್ಲದೆ, ಮನನೊಂದು ಆಸಿಡ್ ಸೇವಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ  ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೆಮ್ರಾಜೆ ಗ್ರಾಮದ ಪತ್ನಿ ವಿನೋದಾ ಕುಮಾರಿಯನ್ನು ಗುಂಡು ಹಾರಿಸಿ ಕೊಂದ ರಾಮಚಂದ್ರಗೌಡ ಆಸಿಡ್ ಸೇವಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ ಕೂಡ ಪತ್ನಿ ವಿನೋದಾ, ಪತಿ ರಾಮಚಂದ್ರ ನಡುವೆ ಗಲಾಟೆ ಆಗಿದೆ.ಜಗಳ ಬಿಡಿಸಲು ಬಂದ ಮಗ ಪ್ರಶಾಂತ್‌ನಿಗೆ ಫೈರಿಂಗ್ ಮಾಡಲು ರಾಮಚಂದ್ರ ಯತ್ನಿಸಿದ್ದಾನೆ. ಮಗನಿಗೆ ಶೂಟ್ ಮಾಡುವಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಕುಮಾರಿ ಮೃತಪಟ್ಟಿದ್ದಾರೆ. ಇದಾದ ನಂತರ ಪತ್ನಿಯ ಸಾವಿನಿಂದ ಮನನೊಂದ ರಾಮಚಂದ್ರ ಆಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ ೨೦೨೩ರ ಕಲಂ ೧೦೩ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ ೨೫ ಮತ್ತು ೨೭ ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";