ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಇಂದು ಮಧ್ಯಾಹ್ನ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸಿಡಿಲು ಬಡಿದು ಬೀರಪ್ಪ (45) ಮತ್ತು ಸುನೀಲ್ (26) ಎನ್ನುವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಹೊಲದಲ್ಲಿ ಕೆಲಸ ಮಾಡುವ ವೇಳೆ, ಜೋರಾಗಿ ಬೀಸಿದ ಗಾಳಿ, ಗುಡುಗು, ಮಳೆಯಿಂದಾಗಿ ಜೋರಾಗಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ ಹಾಗೂ ವಿನೋದ್ ಎಂಬುವ ಬಾಲಕನೂ ಸಿಡಿಲು ಬಡಿದು ಗಾಯಗೊಂಡಿದ್ದಾನೆAದು ಹೇಳಲಾಗಿದೆ.
ಗಾಯಗೊಂಡ ಬಾಲಕನ್ನು ಸಿರುಗುಪ್ಪದಲ್ಲಿನ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತ ವ್ಯಕ್ತಿಗಳ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.