ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ( Prajwal Revanna Pen drive Vide Case) ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್ಐಟಿ ಬಂಧಿಸಿದೆ. ಇಂದು(ಮೇ ೨೮) ಹೈಕರ‍್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್ನನ್ನು ಎಸ್ಐಟಿ ಬಂಧಿಸಿದೆ. ವಿಡಿಯೋ ವೈರಲ್ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳ ಬಂಧನವಾಗಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ರ‍್ಚೆಗೆ ಗ್ರಾಸವಾಗಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್ಬುಕ್ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದ್ರೆ, ನವೀನ್ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಇನ್ನು ವಿಡಿಯೋ ಹಂಚಿಕೆ ಮಾಡಿದ್ದವರ ವಿರುದ್ಧ ದೂರು ದಾಖಲಾಗಿದ್ದರೂ ಸಹ ಇನ್ನೂ ಬಂಧಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಅಲ್ಲದೇ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್‌ನಲ್ಲಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಮಾಜಿ ಸಿಎಂ ಎಚ್‌ಡಿಕೆ ನರ‍್ಧರಿಸಿದ್ದರು. ಈ ಬಗ್ಗೆ ವಕೀಲರ ಜತೆಗೆ ಜೆಡಿಎಸ್ ಲೀಗಲ್ ಟೀಂ ಈಗಾಗಲೇ ಮಾತುಕತೆ ನಡೆಸಿತ್ತಯ ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ಎಸ್ಐಟಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ,
ಲೋಕಸಭಾ ಚುನಾವಣೆಯ ಹೊತ್ತಲಿ ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂದು ಜೆಡಿಎಸ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ಬಳಿಕ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಅವರು ವೈರಲ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನವೀನ್ ಗೌಡ ಅವರು ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.