ಕಂದವಾರ : ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರದ ಸರ್ಕಾರಿ ಶಾಲೆ ಬಳಿ ಇರುವ ಶ್ರೀ ರಾಮ ದೇವಸ್ಥಾನದಲ್ಲಿಂದು ವೈಭವದಿಂದ ರಾಮ ದೇವರಿಗೆ ಪೂಜೆ ನೆರವೇರಿತು.
ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವೆಂದರೆ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಸರ್ಕಾರಿ ಶಾಲೆಯಲ್ಲಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರು ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ್ದರು.
ಈ ದೇವಾಲಯವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಹಿರಿಯ ಛಾಯಾಗ್ರಾಹಕ ಕಂದವಾರ ವೆಂಕಟೇಶ್ ಅವರ ತಂದೆ ಕೆ. ಕೃಷ್ಣಪ್ಪ ಅವರು ನಿರ್ಮಿಸಿದ್ದರು. ಈ ದೇವಾಲಯದಲ್ಲಿ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
Facebook
Twitter
LinkedIn
WhatsApp
Email
Print
Telegram