ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಸಿಎಂ ಕೈಯಲ್ಲಿ, ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್​​​

ಬೆಂಗಳೂರು: ‍ಕರ್ನಾಟಕ ‍ಮರ್ಹಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ. ಸಚಿವ ಬಿ. ನಾಗೇಂದ್ರ ರಾಜಿನಾಮೆ ನೀಡುತ್ತಿದ್ದಂತೆ ಇವರು ನೋಡಿಕೊಳ್ಳುತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಇವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಇಲಾಖೆ ಪ್ರಗತಿ ಪರೀಶಲನಾ ಸಭೆ ನಡೆಸಿದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನರ‍್ಲಕ್ಷ್ಯ ವಹಿಸಿದ್ದಕ್ಕೆ, ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ಗಳಿಗೆ ಇಷ್ಟೆಲ್ಲ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ನಿಯಮಿತವಾಗಿ ಹಾಸ್ಟೆಲ್ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ನೀವು ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು uಟಿಜಿiಣ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವ ಸಬಲೀಕರಣ, ಕ್ರೀಡಾ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದರು. ಅಧಿಕಾರಿಗಳ ಕರ‍್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಕ್ರೀಡಾಂಗಣಗಳ ನರ‍್ವಹಣೆ ಸೂಕ್ತ ರೀತಿಯಲ್ಲಿ ಆಗಿಲ್ಲ. ಕಾಮಗಾರಿಗಳನ್ನ ಸರಿಯಾಗಿ ವೀಕ್ಷಿಸುತ್ತಿಲ್ಲ ಎಂದು ದೂರು ಬಂದ ಹಿನ್ನೆಲೆಯಲ್ಲಿ ಕ್ರೀಡಾ ಇಲಾಖೆಯ ಸಹಾಯಕ ಕರ‍್ಯನರ‍್ವಾಹಕ ಇಂಜಿನಿಯರ್ ಹರೀಶ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದರು.

 

ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕರ‍್ಯರ‍್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕರ‍್ಯರ‍್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಪರಿಶಿಷ್ಟ ಪಂಗಡಗಳ‌ ಕಲ್ಯಾಣ ಇಲಾಖೆ ನರ‍್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕರ‍್ಯರ‍್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top