ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ: ‘ತುಂಬಿದಕೊಡ ತುಳುಕೀತಲೇ ಪರಾಕ್’

Kannada Nadu
ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ: ‘ತುಂಬಿದಕೊಡ ತುಳುಕೀತಲೇ ಪರಾಕ್’

ಹೂವಿನ ಹಡಗಲಿ:  “ತುಂಬಿದಕೊಡ ತುಳುಕೀತಲೇ ಪರಾಕ್’” ಇದು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಐತಿಹಾಸಿಕ ಮೈಲಾರ ಸುಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ಮೈಲಾರ ಸುಕ್ಷೇತ್ರದ ಡೆಂಕನಮರಡಿಯಲ್ಲಿ ರಾಜ್ಯ-ಹೊರ ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಭವಿಷ್ಯವಾಣಿ ಅನುರಣಿಸಿತು.

ಮೈಲಾರಲಿಂಗೇಶ್ವರ ಸ್ವಾಮಿಯ  ಕಾರಣಿಕ ನುಡಿಯು ಈ ವರ್ಷದ ಭವಿಷ್ಯವಾಣಿ ಆಗಿರಲಿದೆ ಎಂಬುದು ಭಕ್ತರ ನಂಬಿಕೆ. ಪ್ರಸಕ್ತ ವರ್ಷ ರಾಜ್ಯ ಮತ್ತು ದೇಶದಲ್ಲಿ ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿದೆ ಎಂದು ವಿಶ್ನೇಷಿಸಲಾಗಿದೆ. ಮಳೆ, ಬೆಳೆ ಸಮೃದ್ಧವಾಗಿ ನಾಡು ಸುಭಿಕ್ಷವಾಗಲಿದೆ ಎಂದು ಭಕ್ತರು ಕಾರಣಿಕ ನುಡಿಯನ್ನು ವ್ಯಾಖ್ಯಾನಿಸುತ್ತಿದ್ದಾರೆ.

ಕಳೆದ 11 ದಿನಗಳ ಉಪವಾಸ ವ್ರತ ಆಚರಿಸಿದ ಗೊರವಪ್ಪ ರಾಮಪ್ಪ ಅವರನ್ನು ಡೆಂಕನಮರಡಿಯ ಸಿಂಹಾಸನ ಕಟ್ಟೆಯಿಂದ ಕಾರ್ಣಿಕದ ಸ್ಥಳಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ಈ ವೇಳೆ  ‘ಏಳು ಕೋಟಿ ಏಳು ಕೋಟಿಗೋ…  ಚಹಾಂಗ ಬಲೋ’ ಎಂಬ ಸ್ವಾಮಿಯ ಉದ್ಘೋಷ ಮುಗಿಲು ಮುಟ್ಟಿತು.

ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರಿಂದ ಭಂಡಾರದ ಆಶೀರ್ವಾದ ಪಡೆದ ಗೊರವಪ್ಪ ರಾಮಪ್ಪ, ಸುಕ್ಷೇತ್ರದ ಪರಂಪರೆಯ ಸಂಕೇತವಾಗಿರುವ ಬಿಲ್ಲು ಏರಿ ‘ಸದ್ದಲೇ’ ಎಂದು ಕೂಗುತ್ತಿದ್ದಂತೆ ಡೆಂಕನಮರಡಿಯಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು ಕ್ಷಣಕಾಲ ಸ್ತಬ್ಧವರಾದರು. ಈ ಸಂದರ್ಭದಲ್ಲಿ ‘ತುಂಬಿದಕೊಡ ತುಳುಕೀತಲೇ ಪರಾಕ್’ ಎಂಬ ದೈವವಾಣಿ (ಕಾರ್ಣಿಕ) ನುಡಿದ ಗೊರವಪ್ಪನವರು ಕೆಳಕ್ಕೆ ಬಿದ್ದರು. ಸುತ್ತಲೂ ನೆರೆದಿದ್ದ ಗೊರವ ಸಮೂಹ ಅವರನ್ನು ಕಂಬಳಿಯಲ್ಲಿ ಹಿಡಿದರು.

ಮೈಲಾರಲಿಂಗೇಶ್ವರ ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂತಲೇ ನಂಬಿಕೊಂಡು ಬರಲಾಗಿದೆ. ಹಲವಾರು ವರ್ಷಗಳಿಂದ ಮೈಲಾರಲಿಂಗೇಶ್ವರ ಕಾರ್ಣಿಕಕ್ಕೆ ಎಲ್ಲಿಲ್ಲದ‌ ಮಹತ್ವವಿದೆ. ವಿಶೇಷವಾಗಿ ರೈತಾಪಿ ವರ್ಗದ ಜನರು ಮೈಲಾರಲಿಂಗೇಶ್ವರ ಕಾರ್ಣಿಕವಾಣಿಯ ಆಧಾರದ ಮೇಲೆಯೇ ವರ್ಷದ ಮಳೆ ಬೆಳೆ ನಿರ್ಧರಿಸುತ್ತಾರೆ. ಹೀಗಾಗಿ ಈ ವರ್ಷದ ಭವಿಷ್ಯವಾಣಿ ಮಹತ್ವ ಪಡೆದುಕೊಂಡಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";