ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತ್ಯೋತ್ಸವ ಸಂದರ್ಭದಲ್ಲಿ ರಾಹುಲ್ ಗಾಂಧಿ ಭೇಟಿ

ತುಮಕೂರು : ನಡೆದಾಡುವ ದೇವೆರೆಂದೇ ಪ್ರಸಿದ್ಧರಾಗಿದ್ದ ತ್ರಿವಿಧ ದಾಸೋಹಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಲಿಂಗಕ್ಯ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತ್ಯೋತ್ಸವ ಸಂದರ್ಭದಲ್ಲಿ ಅವರ ಗದ್ದುಗೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಭೇಟಿ ನೀಡಿ ನಮಿಸಿದರು.

ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ. ಎಚ್. ಮುನಿಯಪ್ಪ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಧ್ರುವನಾರಾಯಣ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top