ಅ. 26 ರಂದು ಶೃಂಗೇರಿ ಶ್ರೀಗಳ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ : ಪೌರ ಕಾರ್ಮಿಕರಿಗೆ ವಿಶೇಷ ಆಹ್ವಾನ

ಬೆಂಗಳೂರು: ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ ತುಂಬುವ ಶುಭ ಸಂದರ್ಭದಲ್ಲಿ ಇದೇ ತಿಂಗಳ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು, ಮನೆ ಕೆಲಸದವರು,  ಕರ್ಮಚಾರಿಗಳಿಗೂ  ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ವೇದಾಂತ ಭಾರತಿ ಸಂಸ್ಥೆಯ ನಿರ್ದೇಶಕ ಡಾ|| ಶ್ರೀಧರ ಹೆಗಡೆ ತಿಳಿಸಿದ್ದಾರೆ. 

ವಿಶೇಷವಾಗಿ ಸೇವಾದೀಪಿಕಾ ಎಂಬ ಶೀರ್ಷಿಕೆಯ ಅಡಿಯಲ್ಲಿ ಕರ್ಮಚಾರಿಗಳಿಗೂ ಮಹಾ ಅಭಿಯಾನದಲ್ಲಿ ಭಾಗವಹಿಸುವಂತೆ ವಿಶೇಷ ಆಹ್ವಾನ ನೀಡಲಾಗಿದ್ದು, ಶೃಂಗೇರಿ ಶಂಕರ ಮಠದ ಆವರಣದಲ್ಲಿ ಇದಕ್ಕಾಗಿ ಸಮರ್ಪಣ ಕಾರ್ಯಕ್ರಮ  ಏರ್ಪಡಿಸಲಾಗಿತ್ತು. ಎಲ್ಲರನ್ನೊಳಗೊಂಡಂತೆ ಮಹಾ ಅಭಿಯಾನ ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಡಾ. ಶೀಧರ ಹೆಗಡೆ, ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ನಡೆಯಲಿರುವ ಮಹಾ ಸಮಾರಂಭದಲ್ಲಿ ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶಂಕರಭಾರತೀ ಮಹಾಸ್ವಾಮೀಜಿ. ಬ್ರಹ್ಮಾನಂದ ಭಾರತೀ ಸ್ವಾಮೀಜಿ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಇದಕ್ಕಾಗಿ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು  ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಕೇಂದ್ರ ಸಂಯೋಜಕರು, ಪ್ರಬಂಧ ವ್ಯವಸ್ಥಾಪಕರು ಸಹಸ್ರಾರು  ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳು ಮತ್ತು  ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಲಾಗಿದೆ.  ನವರಾತ್ರಿಯ ಈ ಸಂದರ್ಭದಲ್ಲಿ ಪಾರಾಯಣಕರ್ತರು ತ್ರಿಪುರಸುಂದರಿ ಅಮ್ಮನವರ ಉಪಾಸನೆ ಮೂಲಕ ಸರ್ವರನ್ನು  ಕಲ್ಯಾಣವೃಷ್ಟಿಸ್ತವ ಮಹಾಭಿಯಾನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top