ನಾಳೆ‌ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವರಾದ ಬಿ.ಸಿ. ನಾಗೇಶ್ ಅವರು ನಾಳೆ (ಮೇ 19) ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.

ಸ್ಥಳ: ಸಭಾಂಗಣ, 2ನೇ ಮಹಡಿ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಮಲ್ಲೇಶ್ವರ, ಬೆಂಗಳೂರು.

ದಿನಾಂಕ: 19 ಮೇ, 2022 , ಸಮಯ: ಮಧ್ಯಾಹ್ನ 12.30. ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ  ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
https://karresults.nic.in/ ನಾಳೆ‌ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

Leave a Comment

Your email address will not be published. Required fields are marked *

Translate »
Scroll to Top