ಮೈಸೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡು ನ್ಯಾಯಯುತವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಆತ್ಮಹತ್ಯೆ ಪ್ರೇರಣೆ ಸರ್ಕಾರವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಮೈಸೂರು ಚಲೋ ಕಾರ್ಯಕ್ರಮದ ಸಮಾರೂಪ ಸಮರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಸಾಧ್ಯವಾಗದೆ ಜೀವ ತೆತ್ತಿದ್ದಾರೆ. ವಾಲ್ಮೀಕಿ ಹಾಗೂ ಮೂಡ ಹಗರಣಗಳಲ್ಲಿ ಮುಖ್ಯಮಂತ್ರಿಗಳಿಗೆ ಸರಿಯಾದ ದಾಖಲೆಗಳನ್ನು ನೀಡಿದರು ಸಹ ಸದನದಲ್ಲಿ ಚರ್ಚೆ ಮಾಡದೆ ಅವಕಾಶ ನೀಡದೆ ಇದ್ದಿದ್ದರಿಂದ ನಾವು ಬೆಂಗಳೂರಿನಿಂದ ಮೈಸೂರಿನವರಗೆ ಪಾದಯಾತ್ರೆ ಮಾಡಬೇಕಾಯಿತು.
ಈಗಲಾದರೂ ಮುಖ್ಯಮಂತ್ರಿಗಳು ತಮ್ಮ ತಪ್ಪಿನ ಅರಿವಾಗಿ ಕೂಡಲೇ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಮುಂದಿನ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಹಾಗೂ ಬಡವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಸ್ವಂತ ಹಿತಕ್ಕಾಗಿ ಬಳಕೆ ಮಾಡಿಕೊಂಡು ಆ ವರ್ಗದ ಜನರಿಗೆ ಅನ್ಯಾಯ ಮಾಡುತ್ತಿದೆ. ದೇಶದ ಯಾವುದೇ ರಾಜ್ಯವು ಸಹ ಕರ್ನಾಟಕದಂತೆ ಭ್ರಷ್ಟಾಚಾರ ಮಾಡಿಲ್ಲ, ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗೂಡಿ ಜನರಿಗೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ.ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಭ್ರಷ್ಟಾಚಾರ ತೊಡೆದು ಹಾಕುವ ವರೆಗೂ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನಮ್ಮ ಹೋರಾಟದ ಹಿನ್ನೆಲೆಯಲ್ಲಿ 14 ನಿವೇಶನಗಳನ್ನು ಹಿಂತಿರುಗಿಸಿದರೆ ಸಾಲದು ಜೊತೆಗೆ ಕಾನೂನು ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಹಗರಣ ದೇಶದಲ್ಲೇ ಬಹುದೊಡ್ಡ ಹಗರಣ ಹಾಗೂ ದೇಶದೆಲ್ಲಡೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಯಾವಾಗಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಅನ್ಯಾಯ ಮಾಡುತ್ತಾ ಬಂದಿದೆ.
ಕಾಂಗ್ರೆಸ್ ನ ಹಿಂದುಳಿದ ನಾಯಕರಿಂದಲೇ ಹಿಂದುಳಿದ ಜನರಿಗೆ ಅನ್ಯಾಯವಾಗುತ್ತಿದೆ.
ಹಿಂದುಳಿ ವರ್ಗಗಳ ನಾಯಕ ನರೇಂದ್ರ ಮೋದಿ ಅವರು, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ, ಆದರೆ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಎರಡು ಪಕ್ಷಗಳು ಒಗ್ಗೂಡಿ ಮುಂದೆಯೂ ಹೋರಾಟ ಮಾಡುತ್ತೇವೆ ಎಂದು ತಿಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವರೆಗೂ ಹೋರಾಟ ನಿಲ್ಲುವುದಿಲ್ಲ, ರಾಜ್ಯದ ಯಾವುದೇ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಅಭಿವೃದ್ಧಿ ಕಾರ್ಯ ಜರುಗುತ್ತಿಲ್ಲ.ಬಾರಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಸರ್ಕಾರದ ಬಗ್ಗೆ ಜನರಿಗೆ ಆಕ್ರೋಶ ಉಂಟಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಜೋಡೆತ್ತುಗಳಾಗಿದ್ದಾರೆ.ನಿಮ್ಮ ಸರ್ಕಾರದ ವಿಶ್ವಾಸವಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸವಾಲು ಹಾಕಿದರು.
ರಾಜ್ಯದಲ್ಲಿ ಬಡವರ ಪರವಾಗಿ ಪಾದಯಾತ್ರೆ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮಾಡುತ್ತಿರುವ ಹೋರಾಟ ಭ್ರಷ್ಟ ಮುಖ್ಯಮಂತ್ರಿಯ ವಿರುದ್ಧ ಆರುವರೆ ಕೋಟಿ ಜನರ ಪರವಾಗಿ ನಾವು ಪಾದಯಾತ್ರೆ ಮಾಡಿದ್ದೇವೆ, ಅದಿಕಾರದ ದಾಹಕ್ಕಾಗಿ ನಾವು ಟೀಕೆ ಮಾಡುತ್ತಿಲ್ಲ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ ರಾಜ್ಯದಲ್ಲಿ ಒಂದು ಸಾವಿರದ ಐನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆರೆ ಬಂದಾಗ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರ ಐದು ಲಕ್ಷ ನೀಡುತ್ತಿತ್ತು, ಈಗಿನ ಸರ್ಕಾರ ಒಂದು ಲಕ್ಷ ರೂ ನು ನೀಡುತ್ತಿಲ್ಲ, ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.