ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ. 2.75 ರಷ್ಟು ಹೆಚ್ಚಳ ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.

Leave a Comment

Your email address will not be published. Required fields are marked *

Translate »
Scroll to Top